Junagadh: ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ವಿಶ್ವ ವನ್ಯಜೀವಿ ದಿನದ (World Wildlife Day) ಅಂಗವಾಗಿ ಸೋಮವಾರ ಬೆಳಿಗ್ಗೆ ಜುನಾಗಢ ಜಿಲ್ಲೆಯ ಗಿರ್ ವನ್ಯಜೀವಿ ಅಭಯಾರಣ್ಯದಲ್ಲಿ ಸಫಾರಿಗೆ (Safari at Gir) ತೆರಳಿದರು.
ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಜೀವವೈವಿಧ್ಯತೆಯನ್ನು ರಕ್ಷಿಸುವ ಮಹತ್ವವನ್ನು ತಿಳಿಸಿದ್ದಾರೆ. ಪ್ರತಿಯೊಂದು ಪ್ರಭೇದವೂ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದ್ದಾರೆ.
ತಮ್ಮ ಟ್ವೀಟ್‌ನಲ್ಲಿ, “ನಮ್ಮ ಗ್ರಹದ ಅದ್ಭುತ ಜೀವವೈವಿಧ್ಯವನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಬದ್ಧರಾಗೋಣ. ಮುಂದಿನ ಪೀಳಿಗೆಗಾಗಿ ಅವುಗಳ ಭವಿಷ್ಯವನ್ನು ಕಾಪಾಡೋಣ. ವನ್ಯಜೀವಿಗಳನ್ನು ರಕ್ಷಿಸುವಲ್ಲಿ ಭಾರತದ ಕೊಡುಗೆಗೆ ನಾವು ಹೆಮ್ಮೆ ಪಡುತ್ತೇವೆ” ಎಂದು ಮೋದಿ ಹೇಳಿದ್ದಾರೆ.