Warangal, Telangana : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ ಹೈದರಾಬಾದ್‌ಗೆ ಆಗಮಿಸಿ ವಾರಂಗಲ್‌ನ ಭದ್ರಕಾಳಿ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದರು. ನಂತರ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಾಯಿತು.
ಯೋಜನೆಗಳ ಪೈಕಿ ಅಂದಾಜು 5,550 ಕೋಟಿ ರೂಗಳ 176 ಕಿಲೋಮೀಟರ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಯೋಜನೆಯೂ ಸೇರಿದ್ದು, 500 ಕೋಟಿ ರೂಪಾಯಿ ಮೌಲ್ಯದ ರೈಲ್ವೇ ವ್ಯಾಗನ್ ಉತ್ಪಾದನಾ ಘಟಕವನ್ನು ಸಹ ಪ್ರಾರಂಭಿಸಲಾಯಿತು. ಭಾರತವು ಜಾಗತಿಕ ಹೂಡಿಕೆಯನ್ನು ಆಕರ್ಷಿಸುತ್ತಿದೆ ಎಂದು ಪ್ರಧಾನಿ ಮೋದಿ ಈ ಸಮಯದಲ್ಲಿ ಒತ್ತಿ ಹೇಳಿದರು.
ಕಾರ್ಯಕ್ರಮದಲ್ಲಿ ತೆಲಂಗಾಣ ರಾಜ್ಯಪಾಲ ತಮಿಳಾ ಸೌಂದರರಾಜನ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಬಿಜೆಪಿ ತೆಲಂಗಾಣ ಘಟಕದ ನೂತನ ಅಧ್ಯಕ್ಷ ಜೆ.ಕಿಶನ್ ರೆಡ್ಡಿ ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ಅವರು ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. 2024ರ ವೇಳೆಗೆ ತೆಲಂಗಾಣದಲ್ಲಿ 2 ಲಕ್ಷ ಕೋಟಿ ರೂ.ಗಳ ಮೂಲಸೌಕರ್ಯ ಯೋಜನೆಗಳು ಪೂರ್ಣಗೊಳ್ಳಲಿವೆ ಎಂದು ಸಚಿವ ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದರು.