Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಪೊಲೀಸ್ ಕಚೇರಿಯ ಕವಾಯತು ಮೈದಾನದಲ್ಲಿ ಸೋಮವಾರ ಪೊಲೀಸ್ ಹುತಾತ್ಮರ ದಿನಾಚರಣೆ (Police Martyrs’ Day) ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ “ಕಾನೂನು ಸುವ್ಯವಸ್ಥೆಗೆ ಹಗಲಿರುಳು ಶ್ರಮಿಸುವ ಪೊಲೀಸರ ಕರ್ತವ್ಯ ಅತಿಮುಖ್ಯವಾದುದು. ಹುತಾತ್ಮ ಪೊಲೀಸರ ತ್ಯಾಗ ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಹುತಾತ್ಮ ಪೊಲೀಸರ ಕೆಲಸ ಕಾರ್ಯಗಳನ್ನು ಸ್ಮರಿಸುವುದು ಉತ್ತಮವಾದುದು. ಗಡಿ ಭಾಗದಲ್ಲಿ ಸೇನೆಯಿಂದ ದೇಶದ ರಕ್ಷಣೆ ಆಗುತ್ತಿದೆ. ಪೊಲೀಸರು ತಮ್ಮ ಜೀವವನ್ನೇ ಪಣಕ್ಕಿಟ್ಟು ಕಾನೂನು ಸುವ್ಯವಸ್ಥೆ ನಿಭಾಯಿಸುವಲ್ಲಿ ತೊಡಗಿದ್ದಾರೆ. ದೇಶದ ಆಂತರಿಕ ಭದ್ರತೆ ಹಾಗೂ ಶಾಂತಿಪಾಲನೆಗೆ ತಮ್ಮ ಪ್ರಾಣ ತ್ಯಾಗ ಮಾಡಿದ ಪೊಲೀಸರನ್ನು ಸ್ಮರಿಸುವ ದಿನ ಇದು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ನಿಟ್ಟಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ಭಾಸ್ಕರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಐ ಖಾಸಿಂ ಮತ್ತಿತರರು ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
The post ಪೊಲೀಸ್ ಹುತಾತ್ಮರ ದಿನಾಚರಣೆ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.