Bengaluru: ಕರ್ನಾಟಕದಲ್ಲಿ BPL Card ಹೊಂದಿರುವವರು ಅಂಚೆ ಕಛೇರಿಯಲ್ಲಿ ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ (Post Office Bhagyalakshmi Sukanya samriddi) ಖಾತೆ (Bhagyalakshmi-Sukanya Samriddhi account ತೆರೆಯಬಹುದು. ಹೆಣ್ಣು ಮಗುವಿನ ಹೆಸರಿನಲ್ಲಿ ವಾರ್ಷಿಕ ರೂ. 3000ದಂತೆ 15 ವರ್ಷಗಳವರೆಗೆ ಹೂಡಿಕೆ ಮಾಡಿ, ಹಲವು ಪ್ರಯೋಜನಗಳನ್ನು ಪಡೆಯಬಹುದಾಗಿದೆ.
ವಾರ್ಷಿಕ 3ರಂತೆ ಒಟ್ಟು ರೂ. 45,000ಗಳನ್ನು ಠೇವಣಿ ಹೂಡಬಹುದು. ಮಗುವಿಗೆ 21 ವರ್ಷ ಪೂರ್ಣಗೊಂಡ ಬಳಿಕ ಈ ಹಣ ಬಡ್ಡಿ ಸಮೇತ ಕೈಗೆ ಬರಲಿದೆ.
ಕುಟುಂಬದಲ್ಲಿ ನಂತರ ಸಮಾಜದಲ್ಲಿ ಹೆಣ್ಣು ಮಕ್ಕಳ ಸ್ಥಾನವನ್ನು ಹೆಚ್ಚಿಸಲು ಮತ್ತು ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನ ಉತ್ತೇಜಿಸಲು 2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಎಂಬ ಯೋಜನೆಯನ್ನು ಜಾರಿಗೆ ತರಲಾಯಿತು.
ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆಗೆ 2006-07 ರಿಂದ 2019-20ನೇ ಸಾಲಿನವರೆಗೆ ಭಾರತೀಯ ಜೀವ ವಿಮಾ ನಿಗಮವು ಪಾಲುದಾರ ಹಣಕಾಸುಸಂಸ್ಥೆಯಾಗಿತ್ತು, 2020-21ನೇ ಸಾಲಿನಿಂದ ಆಡಳಿತಾತ್ಮಕ ಕಾರಣಗಳಿಂದ ಭಾಗ್ಯಲಕ್ಷ್ಮಿ ಯೋಜನೆಯನ್ನು ಸರ್ಕಾರದ ಆದೇಶ ದಿನಾಂಕ 11-10-2020ರಂತೆ ಅಂಚೆ ಇಲಾಖೆಯ ಮೂಲಕ ಅನುಷ್ಠಾನ ಮಾಡಲಾಗುತ್ತಿದೆ.
ಯೋಜನೆಯಡಿ BPL ಕುಟುಂಬದ 2 ಹೆಣ್ಣು ಮಕ್ಕಳಿಗೆ ಪ್ರತಿ ಮಗುವಿನ ಹೆಸರಿನಲ್ಲಿ ವಾರ್ಷಿಕ ರೂ. 3000ದಂತೆ 15 ವರ್ಷಗಳವರೆಗೆ ಒಟ್ಟು ರೂ. 45,000ಗಳನ್ನು ಅಂಚೆ ಇಲಾಖೆಯಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಠೇವಣಿ ಇಡಿ.
ಯೋಜನೆ ಅನ್ವಯ 10ನೇ ತರಗತಿ ನಂತರ ಉನ್ನತ ವಿದ್ಯಾಭ್ಯಾಸಕ್ಕಾಗಿ ಖಾತೆಯಲ್ಲಿರುವ ಮೊತ್ತದ ಶೇ.50ರಷ್ಟು ಭಾಗವನ್ನು ಹಿಂಪಡೆಯಲು ಅವಕಾಶವಿದೆ.
ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆ ಅಡಿ ಖಾತೆ ತೆರೆಯಲು ಅರ್ಜಿ ನಮೂನೆ, ಪೋಷಕರೊಂದಿಗೆ ಮಗುವಿನ ಭಾವಚಿತ್ರ, ಮಗುವಿನ ಮೂಲ ಜನನ ಪ್ರಮಾಣ ಪತ್ರ, ಆದ್ಯತಾ ಕುಟುಂಬ ಪಡಿತರ ಚೀಟಿಯ ಪ್ರತಿ (ಪಡಿತರ ಚೀಟಿಯಲ್ಲಿ ತಂದೆಯ ಹೆಸರು ಇರಬೇಕು) ದಾಖಲೆಗಳು ಅಗತ್ಯವಾಗಿದೆ.
ಪೋಷಕರ ಆಧಾರ್ ಕಾರ್ಡ್, ಮಗುವಿನ ಆಧಾರ್ ಕಾರ್ಡ್, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಪೋಷಕರ ಸ್ವಯಂ ಘೋಷಣಾ ವಿವಾಹ ದೃಢೀಕರಣ ಪತ್ರ (ನಮೂನೆ-6ರಲ್ಲಿ), ಭರ್ತಿ ಮಾಡಿದ ಅರ್ಜಿಯನ್ನು ಮಗು ಹುಟ್ಟಿದ ದಿನಾಂಕದಿಂದ 2 ವರ್ಷ ಪೂರ್ಣಗೊಳ್ಳುವ ಮೊದಲು ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಪಡೆದು ಅಂಗನವಾಡಿ ಕಾರ್ಯಕರ್ತೆಗೆ ನೀಡಿ ಹೆಸರನ್ನು ನೋಂದಾಯಿಸಿ.