Home Karnataka ಪ್ರಜ್ವಲ್ ರೇವಣ್ಣ ಅರ್ಜಿ ಹೈಕೋರ್ಟ್ ವಜಾ

ಪ್ರಜ್ವಲ್ ರೇವಣ್ಣ ಅರ್ಜಿ ಹೈಕೋರ್ಟ್ ವಜಾ

Prajwal Revanna's petition dismissed by High Court

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲು ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ತಳ್ಳಿ ಹಾಕಿದೆ.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮತ್ತು ಮನೆಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಸಿಐಡಿ ಪೊಲೀಸ್ ಠಾಣೆ ಹಾಗೂ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯದಿಂದ ಬೇರೆ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಅವರು ಮನವಿ ಮಾಡಿದ್ದರು.

ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಪೀಠ ಅರ್ಜಿಯನ್ನು ವಜಾ ಮಾಡಿದೆ. ವಿಚಾರಣಾ ನ್ಯಾಯಾಲಯದ ಅವಲೋಕನ ಕಠಿಣವಾಗಿದ್ದರೂ ಅದನ್ನು ಪಕ್ಷಪಾತವೆಂದು ಅರ್ಥೈಸಲಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಪ್ರಕರಣವನ್ನು ವಿಳಂಬಗೊಳಿಸಲು ಪ್ರಯತ್ನ ಮಾಡಿರುವುದರಿಂದ ಅರ್ಜಿ ತಿರಸ್ಕರಿಸಲಾಗಿದೆ ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈಗಾಗಲೇ ಜೀವಾವಧಿ ಜೈಲು ಶಿಕ್ಷೆ ಹಾಗೂ 11 ಲಕ್ಷ 60 ಸಾವಿರ ರೂಪಾಯಿ ದಂಡ ವಿಧಿಸಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version