Home Karnataka Chikkaballapura ಬಾಲ್ಯ ವಿವಾಹ ನಿಷೇಧ ಕಾನೂನು ಅರಿವು ನೆರವು ಕಾರ್ಯಕ್ರಮ

ಬಾಲ್ಯ ವಿವಾಹ ನಿಷೇಧ ಕಾನೂನು ಅರಿವು ನೆರವು ಕಾರ್ಯಕ್ರಮ

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ವಕೀಲರ ಸಂಘ ಹಾಗೂ ಸೆಂಟ್ ಜೋಸೆಫ್ ಪಿಯು ಕಾಲೇಜು ಆಶ್ರಯದಲ್ಲಿ ಸೋಮವಾರ ‘ಪೋಕ್ಸೊ ಕಾಯ್ದೆ, ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ, ಮಕ್ಕಳ ಸಂರಕ್ಷಣಾ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾನೂನು’ ಗಳ ಅರಿವು ನೆರವು (Prohibition of Child Marriage Legal Awareness Program) ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪಾ “ಬಾಲಕಿಯರು ಗರ್ಭಿಣಿ ಆಗುತ್ತಿರುವುದು ಮತ್ತು ಪ್ರಾಣ ಕಳೆದುಕೊಳ್ಳುತ್ತಿರುವುದು ಇತ್ತೀಚಿಗೆ ಹೆಚ್ಚಾಗಿ ಕಂಡು ಬರುತ್ತಿದೆ. ಹದಿಹರೆಯದ ವಯಸ್ಸಿನಲ್ಲಿ ಅಕ್ರಮ ಚಟುವಟಿಕೆಗಳ ಕಡೆ ಗಮನ ಹರಿಸಬಾರದು. 18 ವರ್ಷದ ಒಳಗಿನವರನ್ನು ನಾವು ಮಕ್ಕಳು ಎಂದು ಪರಿಗಣಿಸುತ್ತೇವೆ. ಮಕ್ಕಳ ಲೈಂಗಿಕ ಚಿತ್ರಗಳನ್ನು, ದೃಶ್ಯಗಳನ್ನು ಇಟ್ಟುಕೊಳ್ಳುವುದು, ಮಕ್ಕಳನ್ನು ಲೈಂಗಿಕ ದೃಷ್ಟಿಯಿಂದ ನೋಡುವುದು, ಅಶ್ಲೀಲ ಚಿತ್ರಗಳನ್ನು, ವಾಕ್ಯಗಳನ್ನು ಮಕ್ಕಳಿಗೆ ತೋರಿಸುವುದು, ಅವರೊಂದಿಗೆ ಅಶ್ಲೀಲವಾಗಿ ಮಾತನಾಡುವುದು ಅಪರಾಧ ಆಗುತ್ತದೆ. ರಸ್ತೆ ಬದಿಯಲ್ಲಿ ಹೋಗುವ ಸಂದರ್ಭದಲ್ಲಿ ಯಾರಾದರೂ ಯಾವುದೇ ವ್ಯಕ್ತಿಯನ್ನು ರೇಗಿಸುವುದು, ಕಾಟ ಕೊಡುವುದು, ಹಿಂದೆ ಸುತ್ತಾಡುವುದು ಕಂಡುಬಂದಲ್ಲಿ ಪೋಷಕರಿಗೆ ಅಥವಾ ಮಕ್ಕಳ ಸಹಾಯವಾಣಿ 1098ಕ್ಕೆ ತಕ್ಷಣ ಕರೆ ಮಾಡಿ ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ 2024ನೇ ಸಾಲಿನಲ್ಲಿ ಬಾಲಕಿಯರ ಮೇಲೆ 190 ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆದಿವೆ. 2025ರ ಜನವರಿಯಲ್ಲಿ ಪೋಕ್ಸೊ ಕಾಯ್ದೆಯಡಿ 9 ಪ್ರಕರಣಗಳು ವರದಿಯಾಗಿದ್ದು ಇಂತಹ ಪ್ರಕರಣಗಳನ್ನು ತಡೆಯಲು ಕಾನೂನು ಅರಿವು ಕಾರ್ಯಕ್ರಮವನ್ನು ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ನಿತ್ಯ 5 ಶಾಲೆಗಳಲ್ಲಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು” ಎಂದು ತಿಳಿಸಿದರು.

ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ಕೆ.ವಿ ಅಭಿಲಾಷ್, ಕ್ಷೇತ್ರ ಶಿಕ್ಷಣಾಧಿಕಾರಿ ಮುನಿವೆಂಕಟರಾಮಚಾರಿ, ಸೆಂಟ್ ಜೋಸೆಫ್ ಫ್ರೌಢಶಾಲೆ ಮುಖ್ಯ ಶಿಕ್ಷಕಿ ಅಮ್ರಿತ ಅರುವಿ ಜೋಸೆಫ್ ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

The post ಬಾಲ್ಯ ವಿವಾಹ ನಿಷೇಧ ಕಾನೂನು ಅರಿವು ನೆರವು ಕಾರ್ಯಕ್ರಮ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version