back to top
25.2 C
Bengaluru
Friday, July 18, 2025
HomeKarnatakaಪ್ರಚೋದನಾತ್ಮಕ ಹೇಳಿಕೆ ಪ್ರಕರಣ – Kalladka Prabhakar Bhat ಸೇರಿ 15 ಜನರ ವಿರುದ್ಧ FIR

ಪ್ರಚೋದನಾತ್ಮಕ ಹೇಳಿಕೆ ಪ್ರಕರಣ – Kalladka Prabhakar Bhat ಸೇರಿ 15 ಜನರ ವಿರುದ್ಧ FIR

- Advertisement -
- Advertisement -

Mangaluru: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸರಣಿ ಹತ್ಯೆಗಳು ಸ್ಥಳೀಯ ಪರಿಸ್ಥಿತಿಯನ್ನು ಉದ್ವಿಗ್ನವಾಗಿಸಿವೆ. ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವಾಗಿ ಅಬ್ದುಲ್ ರಹಿಮಾನನ್ನು ಕೊಂದಿರುವ ಆರೋಪದಿಂದ ಕೋಮು ಶಾಂತಿಯು ಕದಡಿದೆ. ಈ ಸಂಬಂಧ ಗಂಭೀರ ತಕರಾರುಗಳು ನಡೆದಿದ್ದು, ಸಚಿವ ದಿನೇಶ್ ಗುಂಡೂರಾವ್ ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.

ಈ ಹಿನ್ನೆಲೆಯಲ್ಲಿ, RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ಅವರು ಸುಹಾಸ್ ಶೆಟ್ಟಿಗೆ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕ ಮಾತುಗಳನ್ನು ಹೇಳಿದರು ಎಂಬ ಆರೋಪದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಮಾತುಗಳು ಸಮಾಜದಲ್ಲಿ ದ್ವೇಷ ಹರಡುವ ರೀತಿಯಲ್ಲಿವೆ ಎಂದು ದೂರಲಾಗಿದೆ.

ಮೇ 12ರಂದು ಬಂಟ್ವಾಳದ ಮದುವೆ ಪ್ಯಾಲೇಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಭಾಕರ ಭಟ್ ಅವರು ಸಮಾಜದ ಶಾಂತಿಗೆ ಧಕ್ಕೆ ತರುವಂತಿತ್ತೆಂದು ಪೊಲೀಸರು ಹೇಳಿದ್ದಾರೆ. ಇದರಿಂದ ಭಾರತ ದಂಡ ಸಂಹಿತೆ 353(2)ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೊಲೆಗಳಿಂದ ಬೇಧಭಾವ ಸೃಷ್ಟಿಯಾಗಿದ್ದು, ಹೊಸ SP ಅವರು ಹಲವು ಸಂಘಟನೆ ಮುಖಂಡರ ಮನೆಗಳಿಗೆ ರಾತ್ರಿ ಸಮಯದಲ್ಲಿ ಭೇಟಿ ನೀಡಿದ್ದಾರೆ. ಪೊಲೀಸರು ಈ ರೀತಿ ಮನೆಗೆ ಬರುವುದನ್ನು ಕೆಲವರು ವಿರೋಧಿಸಿದ್ದಾರೆ. ಮುಂದೆ ನಡೆಯುವ ಸಾಧ್ಯತೆಗಳ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಪ್ರಮೋದ್ ರೈ ನಂದುಗುರಿ, ತಿಲಕ್ ನಂದುಗುರಿ, ಮೋಹನ್ ಕೆರೆಕೋಡಿ, ಚಂದ್ರಶೇಖರ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯಸ್ ನಂದುಗುರಿ, ಉಮೇಶ್ ನೂಜಿಬಾಳ್ತಿಲ, ರಾಧಾಕೃಷ್ಣ ಕೆ., ಜಯಂತ್ ಮತ್ತು ಇನ್ನೂ ಮೂವರು – ಇವರ ಮೇಲೆ ಕಡಬ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಈ ಬಗ್ಗೆ ದಕ್ಷಿಣ ಕನ್ನಡ ವಿಹೆಚ್​​ಪಿ ಜಿಲ್ಲಾ ಸಹ ಕಾರ್ಯದರ್ಶಿ ಪ್ರಮೋದ್ ರೈ ಹೇಳಿಕೆ ನೀಡಿದ್ದು, ರಾತ್ರೋರಾತ್ರಿ ಪೊಲೀಸರು ಆಗಮಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾತ್ರಿ ವೇಳೆ ಮನೆಗಳಿಗೆ ದಿಢೀರ್​ ಭೇಟಿ ನೀಡಿ ಅಪರಾಧಿಗಳಂತೆ ಬಿಂಬಿಸಿದ್ದಾರೆ. ಇದರಿಂದ ನಮ್ಮ ಕುಟುಂಬಸ್ಥರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page