back to top
20.8 C
Bengaluru
Saturday, August 30, 2025
HomeBusinessMetro ದರ ಏರಿಕೆಗೆ ಸಾರ್ವಜನಿಕರ ಆಕ್ರೋಶ

Metro ದರ ಏರಿಕೆಗೆ ಸಾರ್ವಜನಿಕರ ಆಕ್ರೋಶ

- Advertisement -
- Advertisement -

Bengaluru: ನಮ್ಮ ಮೆಟ್ರೋ (Metro) ಪ್ರಯಾಣ ದರ ಹೆಚ್ಚಳಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ದೇಶದ ಇತರ ನಗರಗಳ ಮೆಟ್ರೋ ದರಗಳಿಗೆ ಹೋಲಿಸಿದರೆ, ಬೆಂಗಳೂರಿನ ಮೆಟ್ರೋ ದರವೇ ಹೆಚ್ಚು ಎಂದು ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಯಾಣ ದರ ಏರಿಕೆ ವಿರೋಧಿಸಿ ಸಾರ್ವಜನಿಕರು #RevokeMetroFareHike ಎಂಬ ಹ್ಯಾಶ್‌ಟ್ಯಾಗ್ ಮೂಲಕ ಅಭಿಯಾನ ಆರಂಭಿಸಿದ್ದಾರೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಈ ನಿರ್ಧಾರವನ್ನು ನ್ಯಾಯಸಮ್ಮತವಲ್ಲ ಎಂದು ಹೇಳಿದ್ದಾರೆ. ಮೆಟ್ರೋ ದರ ಏರಿಕೆ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಆಗುತ್ತಿದ್ದು, ಇತರ ನಗರಗಳ ಮೆಟ್ರೋ ದರಗಳಿಗೆ ಹೋಲಿಸಿದರೆ ಇದು ದುಪ್ಪಟ್ಟು ಎಂದು ಅವರು ಟೀಕಿಸಿದ್ದಾರೆ.

ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಕೂಡಾ ಮೆಟ್ರೋ ದರ ಹೆಚ್ಚಳವನ್ನು “ಅನ್ಯಾಯದ ಹೊರೆ” ಎಂದು ಕರೆದಿದ್ದಾರೆ. ಮೆಟ್ರೋ ದರ ನಿಗದಿಯಲ್ಲಿ ಪಾರದರ್ಶಕತೆ ಅಗತ್ಯ ಎಂದು ಅವರು ಒತ್ತಾಯಿಸಿದ್ದಾರೆ.

BMRCL ಮಾಸಿಕ, ತ್ರೈಮಾಸಿಕ ಮತ್ತು ವಾರ್ಷಿಕ ಪಾಸ್ ಪರಿಚಯಿಸುವ ಮೂಲಕ ಪ್ರಯಾಣಿಕರ ಆರ್ಥಿಕ ಹೊರೆಯನ್ನು ಕಡಿಮೆ ಮಾಡಬೇಕು ಎಂದು ಜನರು ಆಗ್ರಹಿಸಿದ್ದಾರೆ. ಈ ಕ್ರಮ ಸಾರ್ವಜನಿಕ ಸಾರಿಗೆ ಬಳಕೆಯನ್ನು ಉತ್ತೇಜಿಸುವುದರಲ್ಲಿ ಸಹಾಯ ಮಾಡಲಿದೆ.

ಇತರ ನಗರಗಳ ಮೆಟ್ರೋ ದರ ಹೋಲಿಕೆ

  • ಕೋಲ್ಕತ್ತಾ ಮೆಟ್ರೋ: ಕನಿಷ್ಠ 5 ರೂ., ಗರಿಷ್ಠ 50 ರೂ.
  • ಚೆನ್ನೈ ಮೆಟ್ರೋ: 25 ಕಿ.ಮೀ.ಗೆ 50 ರೂ.
  • ದೆಹಲಿ ಮೆಟ್ರೋ: 60 ರೂ.
  • ಬೆಂಗಳೂರು ಮೆಟ್ರೋ: 90 ರೂ. (ಹೊಸ ದರ)

ಪ್ರಸ್ತುತ ದರ ಏರಿಕೆ ಪ್ರಯಾಣಿಕರಲ್ಲಿ ಅಸಮಾಧಾನ ಮೂಡಿಸಿದ್ದು, ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಲಾಗಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page