Home Karnataka Chikkaballapura ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ

ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಭಾನುವಾರ ಪಲ್ಸ್ ಪೋಲಿಯೊ (Pulse Polio) ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಚಾಲನೆ ನೀಡಿದರು.

ಶಿಡ್ಲಘಟ್ಟ :

Pulse Polio Program 2024

ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಆರೋಗ್ಯ ಕೇಂದ್ರದಲ್ಲಿ ಶಾಸಕ ಬಿ.ಎನ್. ರವಿಕುಮಾರ್ ಭಾನುವಾರ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಗೌರಿಬಿದನೂರು :

ಗೌರಿಬಿದನೂರು ತಾಲ್ಲೂಕಿನಾದ್ಯಂತ ನಿಗದಿಪಡಿಸಿದ್ದ ಪೋಲಿಯೊ ಬೂತ್‌ಗಳಲ್ಲಿ, ತರಬೇತಿ ಪಡೆದಿದ್ದ ಸ್ವಯಂಸೇವಕರು ಮನೆ, ಶಾಲೆ, ರಸ್ತೆ ಅಕ್ಕ ಪಕ್ಕ ಮತ್ತು ಸುತ್ತಲಿನ ಸಮುದಾಯವನ್ನು ಉತ್ಸಾಹದಿಂದ ಭೇಟಿ ಮಾಡುತ್ತಿದ್ದರು. ಬೆಳಿಗ್ಗೆಯಿಂದಲೇ ವೇಗ ಪಡೆದುಕೊಂಡ ಕಾರ್ಯಕ್ರಮದಲ್ಲಿ ತಾಯಂದಿರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿಕೊಳ್ಳುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿ ಕಂಡುಬಂತು.

ಚೇಳೂರು :

ಚೇಳೂರು ತಾಲ್ಲೂಕಿನಾದ್ಯಂತ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಭಾನುವಾರದ ಪಲ್ಸ್‌ ಪೋಲಿಯೊ ಅಭಿಯಾನ ಯಶಸ್ವಿಯಾಗಿ ನಡೆಯಿತು.

ಚಿಂತಾಮಣಿ :

ಚಿಂತಾಮಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ತಹಶೀಲ್ದಾರ್ ಸುದರ್ಶನಯಾದವ್ ಮಗುವಿಗೆ ಲಸಿಕೆ ಹಾಕಿ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಾಗೇಪಲ್ಲಿ :

ಬಾಗೇಪಲ್ಲಿ ಪುರಸಭೆ, ಸರ್ಕಾರಿ ಆಸ್ಪತ್ರೆ, ತಾಲ್ಲೂಕು ಪಂಚಾಯಿತಿ ಕಚೇರಿಗಳಲ್ಲಿ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಸೇರಿದಂತೆ 10 ಕೇಂದ್ರಗಳಲ್ಲಿ ಲಸಿಕಾ ಕಾರ್ಯಕ್ರಮ ನಡೆಯಿತು. ಒಂದು ಸಂಚಾರ ವಾಹನದ ವ್ಯವಸ್ಥೆ ಮಾಡಲಾಗಿತ್ತು. ಭಾನುವಾರ ಬೆಳಿಗ್ಗೆ 7 ಗಂಟೆಗೆ ಸರ್ಕಾರಿ ಆಸ್ಪತ್ರೆ ಸೇರಿದಂತೆ ವಿವಿಧ ಕಡೆಗಳ ಲಸಿಕಾ ಕೇಂದ್ರಗಳಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.

For Daily Updates WhatsApp ‘HI’ to 7406303366

The post ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ appeared first on Chikkaballapur | ಚಿಕ್ಕಬಳ್ಳಾಪುರ.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version