Home Karnataka Bengaluru Urban ಪುನೀತ್‌ ರಾಜ್‌ಕುಮಾರ್‌ ನಿವಾಸಕ್ಕೆ ರಾಹುಲ್‌ ಗಾಂಧಿ ಭೇಟಿ

ಪುನೀತ್‌ ರಾಜ್‌ಕುಮಾರ್‌ ನಿವಾಸಕ್ಕೆ ರಾಹುಲ್‌ ಗಾಂಧಿ ಭೇಟಿ

157
Rahul Gandhi Visit Puneeth Rajkumar House with D K Shivakumar

Bengaluru : Congress ಸಂಸದ ರಾಹುಲ್‌ ಗಾಂಧಿ (Rahul Gandhi) ಅವರು ಬೆಂಗಳೂರು ನಗರದ ಸದಾಶಿವನಗರದಲ್ಲಿರುವ ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ನಿವಾಸಕ್ಕೆ ಗುರುವಾರ ರಾತ್ರಿ ಭೇಟಿ (Visit) ನೀಡಿ, ಪುನೀತ್‌ ಅವರ ಪತ್ನಿ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ಮತ್ತು ರಾಘವೇಂದ್ರ ರಾಜ್‌ಕುಮಾರ್‌ ಅವರಿಗೆ ಸಾಂತ್ವನ ಹೇಳಿದರು.

ಗುರುವಾರ ಸಂಜೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಮಾಡಿದ ಬಳಿಕ ರಾಹುಲ್‌ ಗಾಂಧಿ ಅವರು ರಾತ್ರಿ ಬೆಂಗಳೂರಿಗೆ ಬಂದರು. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಪುನೀತ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ರಾಹುಲ್‌ ಗಾಂಧಿ ಅವರು ಅಶ್ವಿನಿ, ರಾಘವೇಂದ್ರ ರಾಜ್‌ಕುಮಾರ್‌ ಅವರ ಜೊತೆ ಮಾತುಕತೆ ನಡೆಸಿದರು. ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page