New Delhi : ರಾಜ್ಯಸಭೆಗೆ (Rajya Sabha) ಕರ್ನಾಟಕ (Karnataka) ದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (Veerendra Heggade), ಕೇರಳ (Kerala) ದಿಂದ ಮಾಜಿ ಅಥ್ಲೀಟ್ ಪಿಟಿ ಉಷಾ (PT Usha) , ಆಂಧ್ರಪ್ರದೇಶ (Andhra Pradesh) ದಿಂದ ವಿ.ವಿಜಯೇಂದ್ರ ಪ್ರಸಾದ್ (V. Vijayendra Prasad ), ತಮಿಳುನಾಡಿ (Tamilnadu) ನಿಂದ ಇಳಯರಾಜ (Ilaiyaraaja) ಅವರನ್ನು ನಾಮನಿರ್ದೇಶನ (Nomination) ಮಾಡಲಾಗಿದೆ.
ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಶಿಕ್ಷಣ, ಆರೋಗ್ಯ ಹಾಗೂ ಅನೇಕ ಸಮಾಜಮುಖಿ ಕೆಲಸಗಳಲ್ಲಿ ತಮನ್ನು ತೊಡಗಿಸಿಕೊಂಡಿದ್ದು ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮುಖಾಂತರ ಅನೇಕ ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದ್ದಾರೆ.
ಕೇರಳ ಮೂಲದ ಪಿಟಿ ಉಷಾ ಕಳೆದ ಹಲವು ವರ್ಷಗಳಿಂದ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡಿ ಅವರನ್ನು ಉನ್ನತ ಸ್ಥಾನಕ್ಕೆ ಏರಲು ಸಹಕರಿಸುತ್ತಿದ್ದಾರೆ ಇದು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿಯಾಗಿದ್ದಾರೆ.
ಖ್ಯಾತ ನಿರ್ದೇಶಕ ರಾಜಮೌಳಿ ಅವರ ತಂದೆ ಹಾಗೂ ಪ್ರಖ್ಯಾತ ಚಿತ್ರಕಥೆಗಾರ ವಿ.ವಿಜಯೇಂದ್ರ ಪ್ರಸಾದ್ ಅವರ ಕೃತಿಗಳು ಭಾರತದ ವೈಭವಯುತ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ ಮತ್ತು ಜಾಗತಿಕವಾಗಿ ತಮ್ಮ ಛಾಪು ಮೂಡಿಸಿವೆ.
ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಪ್ರಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರ ಸಂಗೀತ ಸಾಕಷ್ಟು ಜನರನ್ನು ಮಂತ್ರಮುಗ್ಧರನ್ನಾಗಿ ಮಾಡಿದೆ. ವಿನಮ್ರ ಹಿನ್ನಲೆಯಿಂದ ಬಂದು ಇಂದು ಅಪಾರ ಸಾಧನೆ ಮಾಡಿದ ಅವರ ಜೀವನ ಪಯಣ ಸ್ಫೂರ್ತಿದಾಯಕವಾಗಿದೆ.
ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಎಲ್ಲಾರನ್ನು ಪ್ರಧಾನಿ ಮೋದಿ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.