Ramangara : ರಾಮನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಹಯೋಗದಲ್ಲಿ ತಾಲ್ಲೂಕಿನ ಮಾಯಗಾನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಗಳ ಮತ್ತು ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿನಿಯರಿಗೆ “ಓಬವ್ವ ಆತ್ಮ ರಕ್ಷಣಾ ಕಲೆ” (Obavva Self Defence Art) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ “ವಿದ್ಯಾಭ್ಯಾಸ ಹಾಗೂ ಕೆಲಸ ಮಾಡುವ ಸ್ಥಳಗಳಲ್ಲಿ ಹೆಣ್ಣು ಮಕ್ಕಳು ನಿರ್ಭೀತಿ ಮತ್ತು ಆತ್ಮವಿಶ್ವಾಸದಿಂದ ಕೆಲಸ ಮಾಡಲು ರಕ್ಷಣಾ ಕಲೆಗಳು ಅವಶ್ಯಕ. ಈ ಯೋಜನೆಯಡಿ ರಾಜ್ಯದಲ್ಲಿ 1.82 ಲಕ್ಷ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲಾಗುತ್ತಿದೆ. ರಕ್ಷಣಾ ಕಲೆಗಳು ಹೆಣ್ಣು ಮಕ್ಕಳಿಗೆ ದೈರ್ಯ ತುಂಬುವುದರ ಜೊತೆಗೆ ಅವರಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಸಹಾಯಕವಾಗುತ್ತದೆ. ವಿದ್ಯಾಭ್ಯಾಸದ ಹಂತದಲ್ಲೇ ವಿದ್ಯಾರ್ಥಿಗಳು ಗುರಿ ನಿಗದಿಪಡಿಸಿಕೊಂಡು ದೊಡ್ಡ ದೊಡ್ಡ ಕನಸುಗಳನ್ನು ಕಾಣಬೇಕು. ಕನಸುಗಳನ್ನು ನನಸು ಮಾಡಲು ಹಗಲಿರುಳು ಕಷ್ಟ ಪಡಬೇಕು” ಎಂದರು.
ಕಾರ್ಯಮದಲ್ಲಿ ರಾಮನಗರ ನಗರಸಭೆ ಅಧ್ಯಕ್ಷೆ ಬಿ.ಸಿ ಪಾರ್ವತಮ್ಮ, ಮಾಯಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಲಲಿತಾ ಬಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶಿವಪ್ರಿಯಾ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಆಧ್ಯಕ್ಷ ಸತೀಶ್, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜೈ ಪ್ರಕಾಶ್, ಕುಮಾರಸ್ವಾಮಿ, ಸರೋಜಮ್ಮ, ಜಿಲ್ಲಾ ಸಮನ್ವಯಾಧಿಕಾರಿ ಮಹೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ಸಿದ್ಧರಾಜು, ರವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್. ನಿರ್ಮಲಾ, ಕರಾಟೆ ತರಬೇತುದಾರ ರಾದ ಶ್ರೀನಿವಾಸ್ ಹಾಗೂ ಪುಷ್ಪವತಿ ಉಪಸ್ಥಿತರಿದ್ದರು.