Home Karnataka Ramanagara ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ವಾಟಾಳ್‌ ನಾಗರಾಜ್ ಪ್ರತಿಭಟನೆ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ವಾಟಾಳ್‌ ನಾಗರಾಜ್ ಪ್ರತಿಭಟನೆ

Ramanagara Vatal Nagaraj Mekedatu Project Protest

Ramanagara : ರಾಮನಗರ ನಗರದ ಐಜೂರು ವೃತ್ತದಲ್ಲಿ ಶುಕ್ರವಾರ ಮೇಕೆದಾಟು ಯೋಜನೆ (Mekedatu project) ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್ (Vatal Nagaraj) ನೇತೃತ್ವದಲ್ಲಿ ಪ್ರತಿಭಟನೆ (Protest) ನಡೆಸಲಾಯಿತು.

ಸುದ್ಧಿಗಾರರೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜು ” ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯೋಜನಾ ವರದಿಯನ್ನು ಈ ಹಿಂದೆಯೇ ಕೊಟ್ಟಿದ್ದು ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳುವ ಸಲುವಾಗಿ ಈ ವರದಿಯನ್ನು ಮೂಲೆ ಗುಂಪು ಮಾಡಿ ಆ ರಾಜ್ಯದ ಪರ ನಿಂತಿದೆ. ಮೇಕೆದಾಟಿನಲ್ಲಿ ಜಲಾಶಯ ನಿರ್ಮಾಣಕ್ಕೆ ತಮಿಳುನಾಡು ಅಡ್ಡಿಪಡಿಸುತ್ತಿರುವುದನ್ನು ಖಂಡಿಸಿ ಇದೇ 19ರಂದು ಚಾಮರಾಜನಗರ-ತಮಿಳುನಾಡು ಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತದೆ” ಎಂದು ಹೇಳಿದರು.

ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಎಂ.ಜಗದೀಶ್, ಕರುನಾಡ ವಿಜಯ ಸೇನೆಯ ದೀಪಕ್, ಭಾರತೀಯ ಸೇವಾ ಸಮಿತಿಯ ರಾಮಚಂದ್ರ, ಸ್ಥಳೀಯರಾದ ಗಾಯತ್ರಿಬಾಯಿ, ಚಂದ್ರಕಲಾ, ಶಿವಪ್ರಸಾದ್ ಮತಿತ್ತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version