
Delhi: ಕರ್ನಾಟಕ BJP ಪಕ್ಷದಲ್ಲಿ ಬಣ ರಾಜಕೀಯ ಇನ್ನೂ ಕೊನೆಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಮತ್ತೆ BJP ರೆಬೆಲ್ಸ್ ತಂಡ ತಮ್ಮ ಚಟುವಟಿಕೆ ಆರಂಭಿಸಿದ್ದು, ಕೇಂದ್ರ ನಾಯಕರ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಅಸಮಾಧಾನಗೊಂಡಿರುವ ಈ ನಾಯಕರು ನಿರಂತರವಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಇತ್ತೀಚೆಗೆ, ಈ ರೆಬೆಲ್ಸ್ ನಾಯಕರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದು, ಅಮಿತ್ ಶಾ ಅವರ ಭೇಟಿಯ ಸಾಧ್ಯತೆ ಕುತೂಹಲ ಮೂಡಿಸಿದೆ. ಈಗಾಗಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದೆಹಲಿಗೆ ಆಗಮಿಸಿದ್ದು, ಇಂದು ಮಾಜಿ ಸಚಿವ ಅರವಿಂದ್ ಲಿಂಬಾವಳಿ ಸಹ ದೆಹಲಿಗೆ ಬರುವ ನಿರೀಕ್ಷೆಯಿದೆ.
ಅಮಿತ್ ಶಾ ಅವರನ್ನು ಭೇಟಿ ಮಾಡುವ ಮೊದಲು, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಲಿಂಬಾವಳಿ ಹಾಗೂ ಮಾಜಿ ಸಂಸದ ಸಿದ್ದೇಶ್ವರ್ ಸಭೆ ನಡೆಸುವ ಸಾಧ್ಯತೆ ಇದೆ. ಈ ಸಭೆಯಲ್ಲಿ ಚರ್ಚೆಯ ಪ್ರಮುಖ ಅಂಶಗಳನ್ನು ನಿರ್ಧರಿಸಿ, ನಂತರ ಅಮಿತ್ ಶಾ ಮುಂದೆ ಪ್ರಸ್ತಾಪಿಸಲಾಗುವ ಸಾಧ್ಯತೆ ಇದೆ.