Chikkaballapur : ಚಿಕ್ಕಬಳ್ಳಾಪುರ ನಗರ ಸೇರಿದಂತೆ ಜಿಲ್ಲೆಯಾದ್ಯಂತ 76ನೇ ಗಣರಾಜ್ಯೋತ್ಸವ ದಿನವನ್ನು (Republic Day) ಸಾರ್ವಜನಿಕರು ಸಂಭ್ರಮ ಸಡಗರದಿಂದ ಆಚರಿಸಿದರು.

ಚಿಕ್ಕಬಳ್ಳಾಪುರ ನಗರದ ಸರ್.ಎಂ. ವಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಧ್ವಜಾರೋಹಣ ನೆರವೇರಿಸಿದರು.
ಬಾಗೇಪಲ್ಲಿ :
ಬಾಗೇಪಲ್ಲಿ ಪಟ್ಟಣದ ಬಾಲಕಿಯರ ಶಾಲಾವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಭಾನುವಾರ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮನೀಷಾ ಎನ್. ಪತ್ರಿ ಗೌರವ ವಂದನೆ ಸ್ವೀಕರಿಸಿದರು.
ಗುಡಿಬಂಡೆ :
ಗುಡಿಬಂಡೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಗೌರಿಬಿದನೂರು :
ಗೌರಿಬಿದನೂರು ನಗರದ ನೇತಾಜಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವದಲ್ಲಿ ಶಾಸಕ ಕೆ.ಎಚ್. ಪುಟ್ಟಸ್ವಾಮಿ ಗೌಡ ಅವರು ಧ್ವಜಾರೋಹಣ ನೆರವೇರಿಸಿದರು.
ಶಿಡ್ಲಘಟ್ಟ :
ಶಿಡ್ಲಘಟ್ಟ ನಗರದ ನೆಹರು ಕ್ರೀಡಾಂಗಣದಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ 76ನೇ ಗಣರಾಜ್ಯೋತ್ಸವದಲ್ಲಿ ಶಾಸಕ ಬಿ.ಎನ್.ರವಿಕುಮಾರ್ ಭಾಗವಹಿಸಿದರು.
ಚಿಂತಾಮಣಿ :
ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ನಗರದ ಝಾನ್ಸಿರಾಣಿ ಲಕ್ಷ್ಮೀಬಾಯಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ತಹಶೀಲ್ದಾರ್ ಸುದರ್ಶನ ಯಾದವ್ ಗೌರವ ವಂದನೆ ಸ್ವೀಕರಿಸಿದರು.
For Daily Updates WhatsApp ‘HI’ to 7406303366
The post ಜಿಲ್ಲೆಯಾದ್ಯಂತ 76ನೇ ಗಣರಾಜ್ಯೋತ್ಸವ ಆಚರಣೆ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.