back to top
25.2 C
Bengaluru
Wednesday, October 8, 2025
HomeKarnatakaಕಂದಾಯ ಸಚಿವ Krishna Byre Gowda ವಿರುದ್ಧ ರಾಜ್ಯಪಾಲರಿಗೆ ದೂರು

ಕಂದಾಯ ಸಚಿವ Krishna Byre Gowda ವಿರುದ್ಧ ರಾಜ್ಯಪಾಲರಿಗೆ ದೂರು

- Advertisement -
- Advertisement -

Bengaluru: ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byre Gowda) ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಈ ಸಂಬಂಧ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ಗೆ ದೂರು ಸಲ್ಲಿಸಿದ್ದಾರೆ. ಸಚಿವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.

ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ, ಮತ್ತು ಅಧಿಕಾರದ ದುರುಪಯೋಗದ ಪ್ರಕರಣಗಳಿಗೆ ಸಂಬಂಧಿಸಿದ ಆರೋಪಗಳು ಕೇಳಿಬಂದಿವೆ. ಸಚಿವರು ಈ ಪ್ರಕರಣಗಳಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದೆ, ಅವರನ್ನು ರಕ್ಷಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಸರ್ವೆ ಸಂಖ್ಯೆ 150ರ ಜಮೀನಿನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದು ದೂರಿನ ಮುಖ್ಯ ಅಂಶ. ಚೀಟಿಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿದ್ದು, ಜಮೀನು ಖಾಸಗಿ ಕಂಪನಿಗೆ ಮಾರಾಟವಾಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಹಶೀಲ್ದಾರ್ ಮತ್ತು ಉಪವಿಭಾಗಾಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಪಲ್ಟಿತ್ ಡೆವಲಪರ್ಸ್ ಕಂಪನಿಯೊಂದಿಗೆ ನೇರವಾಗಿ ಭಾಗಿಯಾಗಿದ್ದಾರೆ ಎಂಬ ಆರೋಪ ಹೊರಿಸಲಾಗಿದೆ. ಈ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ, ಸರ್ಕಾರದ ಜಮೀನನ್ನು ರಕ್ಷಿಸಬೇಕೆಂದು ಆಗ್ರಹಿಸಲಾಗಿದೆ.

ಸರ್ಕಾರದಿಂದ ಮಂಜೂರಾದ ಜಮೀನುಗಳು ಸರಿಯಾಗಿ ನಕಲು ಮತ್ತು ದುರಸ್ತಿ ಮಾಡದೆ, ಅಕ್ರಮ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಈ ಪ್ರಕರಣದ ಬಗ್ಗೆ ಆಳವಾದ ತನಿಖೆ ನಡೆಸಿ, ಬಿಗಿ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page