Search
WhatsApp alerts

Home › Environment

ಧಾರಾಕಾರ ಮಳೆಯಿಂದ ರಸ್ತೆ ಕೊಚ್ಚಿ ಹೋಗಿದ್ದು, ಬೆಳಗಾವಿ-ಗೋವಾ ಹೆದ್ದಾರಿ ಬಂದ್

administrator · Published

Road washed away due to heavy rains, Belgaum-Goa highway closed

ಬೆಳಗಾವಿ ಜಿಲ್ಲೆಯ ಪಶ್ಚಿಮ ಘಟ್ಟ ಪ್ರದೇಶದಲ್ಲಿ ತೀವ್ರ ಮಳೆಯಾಗುತ್ತಿರುವ (heavy rain) ಪರಿಣಾಮ, ಮಲಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಇದರ ಕಾರಣದಿಂದ ಬೆಳಗಾವಿ ಮತ್ತು ಗೋವಾಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ಹೆದ್ದಾರಿ ಬಂದ್ (highway closed) ಆಗಿದೆ.

ಖಾನಾಪುರ ತಾಲ್ಲೂಕಿನ ಕಣಕುಂಬಿಯಲ್ಲಿ ಮಲಪ್ರಭಾ ನದಿಯ ಉಗಮವಿದೆ. ಈ ಮಾರ್ಗದಲ್ಲಿರುವ ಕಸಮಳಿ ಗ್ರಾಮದಲ್ಲಿ ನದಿಗೆ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಆದರೆ ಏಕಾಏಕಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ, ಮಣ್ಣಿನಿಂದ ತಾತ್ಕಾಲಿಕವಾಗಿ ಮಾಡಿದ ರಸ್ತೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ.

ಈ ಹೆದ್ದಾರಿ ಜಾಂಬೋಟಿ ಹಾಗೂ ಚೋರ್ಲಾ ಮಾರ್ಗವಾಗಿ ಗೋವಾಕ್ಕೆ ಹೋಗುವ ಮುಖ್ಯ ಸಂಪರ್ಕ ಮಾರ್ಗವಾಗಿದೆ. ಹಳೆ ಸೇತುವೆ ಬದಲಿಗೆ ಹೊಸ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ತಾತ್ಕಾಲಿಕವಾಗಿ ಮಾಡಿದ ಮಣ್ಣು ರಸ್ತೆ ನೀರಿನಲ್ಲಿ ಕೊಚ್ಚಿಹೋಗಿದ್ದು, ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಅಲ್ಲದೇ ನಿರ್ಮಾಣ ಹಂತದಲ್ಲಿರುವ ಹೊಸ ಸೇತುವೆಯೂ ಭಾಗಶಃ ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿದೆ. ಮಳೆಗಾಲ ಮುಗಿಯುವವರೆಗೆ ಈ ಮಾರ್ಗದಲ್ಲಿ ಸಂಚಾರ ಪುನರಾರಂಭ ಆಗುವುದು ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಜನರು ಬೆಳಗಾವಿ, ಖಾನಾಪುರ ಮತ್ತು ರಾಮನಗರ ಮಾರ್ಗವಾಗಿ ಗೋವಾಕ್ಕೆ ಪ್ರಯಾಣಿಸುತ್ತಿದ್ದಾರೆ.

For Daily Updates WhatsApp ‘HI’ to 7406303366

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page