ಚಾಂಪಿಯನ್ಸ್ ಟ್ರೋಫಿ ಮುಗಿದ ನಂತರ ರೋಹಿತ್ ಶರ್ಮಾ (Rohit Sharma) ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳುವ ಸಾಧ್ಯತೆ ಇದೆ. ಬಿಸಿಸಿಐ ಹೊಸ ನಾಯಕನ ಆಯ್ಕೆ ಬಗ್ಗೆ ಯೋಚನೆ ಮಾಡುತ್ತಿರುವ ಕಾರಣ, ಈ ಟೂರ್ನಿಯ ಬಳಿಕ ಅವರು ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ ಎಂಬ ವರದಿಗಳು ಹೊರಬಿದ್ದಿವೆ.
ಚಾಂಪಿಯನ್ಸ್ ಟ್ರೋಫಿಯ ಕೊನೆಯ ಪಂದ್ಯವೇ ರೋಹಿತ್ ಶರ್ಮಾಗೆ ಅಂತಿಮ ಅಂತಾರಾಷ್ಟ್ರೀಯ ಏಕದಿನ ಪಂದ್ಯವಾಗುವ ಸಾಧ್ಯತೆ ಇದೆ. ಈ ಬಳಿಕ ಅವರನ್ನು ಏಕದಿನ ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆ ಕಡಿಮೆ.
ಟೀಮ್ ಇಂಡಿಯಾದ ಆಯ್ಕೆದಾರರು 2027ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಹೊಸ ತಂಡ ರೂಪಿಸುವ ಯೋಜನೆ ನಡೆಸುತ್ತಿದ್ದಾರೆ. ಈ ಕಾರಣದಿಂದಲೇ ರೋಹಿತ್ ಶರ್ಮಾ ಭವಿಷ್ಯವೂ ಈ ಚಾಂಪಿಯನ್ಸ್ ಟ್ರೋಫಿಯ ಮೇಲೆ ಅವಲಂಬಿತವಾಗಿದೆ.
ಈ ವಿಷಯದ ಬಗ್ಗೆ ರೋಹಿತ್ ಶರ್ಮಾ ಮತ್ತು ಆಯ್ಕೆ ಸಮಿತಿಯ ನಡುವೆ ಚರ್ಚೆ ನಡೆದಿದ್ದು, ಚಾಂಪಿಯನ್ಸ್ ಟ್ರೋಫಿಯ ಬಳಿಕ ಅವರು ತಮ್ಮ ಭವಿಷ್ಯದ ಬಗ್ಗೆ ಸ್ಪಷ್ಟ ನಿರ್ಧಾರ ಪ್ರಕಟಿಸಲಿದ್ದಾರೆ. ಈಗಾಗಲೇ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ, ಹಾಗೆಯೇ ಏಕದಿನ ಕ್ರಿಕೆಟ್‌ನಿಂದ ಕೂಡ ಬಿಸಿಸಿಐ ನಿವೃತ್ತಿ ಬಯಸುತ್ತಿದೆ ಎಂಬುದೂ ಸ್ಪಷ್ಟವಾಗಿದೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರು ನಿರಾಸಾಜನಕ ಪ್ರದರ್ಶನ ನೀಡಿದ ಕಾರಣ, ಮುಂಬರುವ ಇಂಗ್ಲೆಂಡ್ ಟೆಸ್ಟ್ ಸರಣಿಗೂ ಆಯ್ಕೆಗೊಳ್ಳುವ ಸಾಧ್ಯತೆ ಕಡಿಮೆಯಾಗಿದೆ. ಹೀಗಾಗಿ, ಚಾಂಪಿಯನ್ಸ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಬಹುದು.