Bengaluru/ Bangalore : ಮಾಜಿ ಮುಖ್ಯಮಂತ್ರಿ (Former Chief minister of Karnataka) ಹಾಗೂ BJP ಮುಖಂಡ ಎಸ್.ಎಂ. ಕೃಷ್ಣ (S. M. Krishna) ಅವರು ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರಿಗೆ ಕೃತಕ ಉಸಿರಾಟದ ಸಂಪರ್ಕ ಕಲ್ಪಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಶ್ವಾಸಕೋಶ ತಜ್ಞರಾದ ಡಾ. ಸತ್ಯನಾರಾಯಣ ಮೈಸೂರು ಮತ್ತು ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ವಿಶೇಷ ತಂಡ ಎಸ್ ಎಂ ಕೃಷ್ಣ ರವರಿಗೆ ಗೆ ಚಿಕಿತ್ಸೆ ನೀಡುತ್ತಿದ್ದು ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಶಾಸಕ ಬಿ.ಎಸ್. ಯಡಿಯೂರಪ್ಪ (B. S. Yediyurappa), ಆರೋಗ್ಯ ಸಚಿವ ಡಾ.ಕೆ. ಸುಧಾಕರ್ (K. Sudhakar) ಸೇರಿ ಹಲವರು ಆಸ್ಪತ್ರೆಗೆ ಭೇಟಿ ನೀಡಿ, ಕೃಷ್ಣ ರವರ ಆರೋಗ್ಯ ವಿಚಾರಿಸಿದರು.