Sabarimala, Kerala : ಕೇರಳದ (Kerala) ವಯನಾಡಿನಲ್ಲಿ ಶಬರಿಮಲೆಯಿಂದ (Sabarimala) ಕರ್ನಾಟಕಕ್ಕೆ (Karnataka) ವಾಪಸಾಗುತ್ತಿದ್ದ ಯಾತ್ರಾರ್ಥಿಗಳನ್ನು ಹೊತ್ತ ಮಿನಿ ಬಸ್ ಪಲ್ಟಿಯಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ಇಂದು ಬೆಳಗಿನ ಜಾವ 6 ಗಂಟೆಗೆ ಕಿರಿದಾದ ತಿರುನೆಲ್ಲಿ ಥೆಟ್ಟು ರಸ್ತೆಯಲ್ಲಿ ಸಂಭವಿಸಿದೆ. ಬಸ್ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಅಪಘಾತ ಸಮಯದಲ್ಲಿ ಬಸ್ಸಿನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ತಕ್ಷಣವೇ ಮಾನಂತವಾಡಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.
ಸ್ಥಳೀಯರು, ಸಹ ಪ್ರಯಾಣಿಕರು, ಪೊಲೀಸರು, ಮತ್ತು ಅಗ್ನಿಶಾಮಕ ದಳದವರು ತಕ್ಷಣದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. 53 ಪ್ರಯಾಣಿಕರ ಪೈಕಿ 25 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಅದರಲ್ಲಿ ಇಬ್ಬರು ಮಕ್ಕಳು ಕೂಡ ಸೇರಿದ್ದಾರೆ. ಇತರ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದೊಯ್ಯುವ ವಾಹನಗಳು ಘಾಟ್ ರಸ್ತೆಯಲ್ಲಿ ವೇಗವಾಗಿ ಚಲಿಸುವ tendancy ಬಗ್ಗೆ ದೂರುಗಳು ಕೇಳಿಬಂದಿವೆ. ಚಾಲಕರು ಕೆಲವೊಮ್ಮೆ ರಸ್ತೆ ನಿಯಮಗಳನ್ನು ನಿರ್ಲಕ್ಷಿಸುತ್ತಾರೆ. ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಮತ್ತು ಓಡಾಟದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ವಾಹನ ಚಾಲಕರಲ್ಲಿ ಗಮನಾರ್ಹ ಬದಲಾವಣೆ ತರಲು ಆವಶ್ಯಕತೆಯ ಬಗ್ಗೆ ಬೇಡಿಕೆ ಕೇಳಿಬರುತ್ತಿದೆ.