Home Sports Cricket Cricket: ದಾಖಲೆ ಬರೆದ Sarfaraz Khan

Cricket: ದಾಖಲೆ ಬರೆದ Sarfaraz Khan

Cricket Sarfaraz Khan

ಇರಾನಿ ಕಪ್ ಪಂದ್ಯದಲ್ಲಿ ಡಬಲ್ ಸೆಂಚುರಿ (double century) ಸಿಡಿಸಿ ಮಿಂಚಿದ್ದ ಸರ್ಫರಾಝ್ ಖಾನ್ (Sarfaraz Khan) ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ (international cricket) ಚೊಚ್ಚಲ ಶತಕ ಪೂರೈಸಿದ್ದಾರೆ. ಬೆಂಗಳೂರಿನಲ್ಲಿ (Bengaluru) ನಡೆಯುತ್ತಿರುವ ನ್ಯೂಝಿಲೆಂಡ್ (New Zealand) ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ (IND vs NZ) ಸರ್ಫರಾಝ್ ಖಾನ್ ಕೇವಲ 110 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದಾರೆ.

ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸರ್ಫರಾಝ್ ಶೂನ್ಯಕ್ಕೆ ಔಟಾಗಿದ್ದರು. ಆದರೆ ದ್ವಿತೀಯ ಇನಿಂಗ್ಸ್​ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿರುವ ಸರ್ಫರಾಝ್ ಖಾನ್ ಕೇವಲ 110 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ.

ಈ ಮೂಲಕ ಟೆಸ್ಟ್ ಪಂದ್ಯವೊಂದರಲ್ಲಿ ಶೂನ್ಯದೊಂದಿಗೆ ಶತಕ ಸಿಡಿಸಿದ ವಿಶೇಷ ಸಾಧಕರ ಪಟ್ಟಿಗೆ ಸರ್ಫರಾಝ್ ಖಾನ್ ಸೇರ್ಪಡೆಯಾಗಿದ್ದಾರೆ.

ಅದರಲ್ಲೂ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶೂನ್ಯದ ಜೊತೆಗೆ ಶತಕ ಬಾರಿಸಿದ ಎರಡನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸರ್ಫರಾಝ್ ಖಾನ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಬರೆದಿದ್ದು ಗಬ್ಬರ್ ಖ್ಯಾತಿಯ ಶಿಖರ್ ಧವನ್.

2014 ರಲ್ಲಿ ಆಕ್ಲೆಂಡ್​ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶಿಖರ್ ಧವನ್ ಮೊದಲ ಇನಿಂಗ್ಸ್​ನಲ್ಲಿ ಸೊನ್ನೆಗೆ ಔಟಾಗಿದ್ದರು. ಆದರೆ ದ್ವಿತೀಯ ಇನಿಂಗ್ಸ್​ನಲ್ಲಿ 115 ರನ್ ಬಾರಿಸಿ ಮಿಂಚಿದ್ದರು.

147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 183 ಆಟಗಾರರು ಮಾತ್ರ ಸೊನ್ನೆ ಜೊತೆಗೆ ಶತಕ ಸಿಡಿಸಿದ ಅಪರೂಪದ ದಾಖಲೆ ಹೊಂದಿದ್ದಾರೆ.

ಈ ಶೂನ್ಯ-ಶತಕದ ದಾಖಲೆ ಪಟ್ಟಿಯಲ್ಲಿ ಇದೀಗ 183ನೇ ಬ್ಯಾಟರ್ ಆಗಿ ಸರ್ಫರಾಝ್ ಖಾನ್ ಕಾಣಿಸಿಕೊಂಡಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version