
Bengaluru: “ಕರ್ನಾಟಕ ಪ್ರಗತಿಪಥದಲ್ಲಿರುವ ರಾಜ್ಯ. ಇದರ ಹಿಂದೆ ಹೆಚ್ಚಿನ ಸರ್ಕಾರಿ ನೌಕರರ ಪ್ರಾಮಾಣಿಕ ಸೇವೆ ಕಾರಣವಾಗಿದೆ. ನಿಮ್ಮ ಶ್ರಮದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದ ಎರಡನೇ ಸ್ಥಾನ ಪಡೆಯಲಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮವನ್ನು ಸಿಎಂ ಉದ್ಘಾಟಿಸಿ, 2023ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗಳನ್ನು ನೀಡಿದ್ದಾರೆ.
“ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಮತ್ತು ಮಾಧ್ಯಮ – ಇವು ಸಮಾಜದ ಮುಖ್ಯ ಅಂಗಗಳು. ಇವು ಸಂವಿಧಾನದ ಆಶಯದಂತೆ ಕೆಲಸ ಮಾಡಬೇಕು. ಜಾತ್ಯತೀತ ಸಮಾಜ ನಿರ್ಮಾಣ ಮತ್ತು ಜಾತಿ ಅಸಮಾನತೆ ನಿವಾರಣೆಯೇ ಮುಖ್ಯ ಉದ್ದೇಶ” ಎಂದು ಸಿಎಂ ಹೇಳಿದರು.
“ಈ ಮಹಾನಾಯಕರ ಆಶಯಗಳನ್ನು ಅಂಬೇಡ್ಕರ್ ಸಂವಿಧಾನದಲ್ಲಿ ಅಳವಡಿಸಿದ್ದಾರೆ. ನಾವು ಸಂವಿಧಾನ ಪಾಲಿಸಿ ನಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮಾಡಬೇಕು” ಎಂದು ಹೇಳಿದರು.
“ಇವತ್ತಿನ ಪ್ರಶಸ್ತಿ ಪುರಸ್ಕೃತರು ಉಳಿದ 5.5 ಲಕ್ಷ ನೌಕರರಿಗೆ ಪ್ರೇರಣೆಯಾಗಬೇಕು. ಪ್ರಶಸ್ತಿ ಪಡೆದವರ ಹೊಣೆಗಾರಿಕೆ ಇನ್ನೂ ಹೆಚ್ಚಾಗಿದೆ. ಎಲ್ಲಾ ನೌಕರರೂ ಕರ್ತವ್ಯ ನಿರ್ವಹಣೆಯಲ್ಲಿ ಹೆಚ್ಚು ನಿಷ್ಠೆಯಿಂದ ಕೆಲಸ ಮಾಡಬೇಕು” ಎಂದು ಹೇಳಿದರು.
“ರಾಜಕೀಯ ಸ್ವಾತಂತ್ರ್ಯಕ್ಕಿಂತ ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯ ಮುಖ್ಯ. ಜಾತಿ ಅಸಮಾನತೆಯ ಬೇರುವನ್ನು ಕಿತ್ತು ಹಾಕುವ ನಿಟ್ಟಿನಲ್ಲಿ ಕೆಲಸ ಮಾಡೋಣ” ಎಂದು ಕರೆ ನೀಡಿದರು.
ಈ ಸಲ 30 ಮಂದಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲಾಯಿತು.
- ಜಿಲ್ಲಾಮಟ್ಟದ ಪ್ರಶಸ್ತಿಗೆ ನಗದು ಬಹುಮಾನ ₹10,000 ರಿಂದ ₹25,000ಕ್ಕೆ ಹೆಚ್ಚಿಸಲಾಗಿದೆ.
- ರಾಜ್ಯಮಟ್ಟದ ಪ್ರಶಸ್ತಿಗೆ ₹25,000ರಿಂದ ₹50,000ಕ್ಕೆ ಏರಿಸಲಾಗಿದೆ.