Delhi: ಬೆಳಗಾವಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ಸತೀಶ್ ಜಾರಕಿಹೊಳಿಯವರು (Satish Jarkiholi) ಇಂದು ದೆಹಲಿಯಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು (Mallikarjun Kharge) ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಭೇಟಿ ರಹಸ್ಯವಾಗಿದ್ದು, ಆ ಬಗ್ಗೆ ಪಕ್ಷವಾಗಲೀ, ಸಚಿವ ಸತೀಶ್ ಜಾರಕಿಹೊಳಿಯಾಗಲೀ (Satish Jarkiholi) ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದು Congress ನಲ್ಲಿ ಊಹಾಪೋಹಗಳಿಗೆ ಕಾರಣವಾಗಿದೆ.
MUDA ಕೇಸ್ ನಲ್ಲಿ ಸಿಲುಕಿರುವ ಸಿದ್ದರಾಮಯ್ಯನವರನ್ನು ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಅವರ ಸ್ಥಾನಕ್ಕೆ ದಲಿತ ನಾಯಕರೊಬ್ಬರನ್ನು ಸಿಎಂ ಮಾಡುವ ಸಾಧ್ಯತೆಗಳಿವೆ. ಹಾಗಾಗಿಯೇ ಸತೀಶ್ ಜಾರಕಿಹೊಳಿಯವರು ಖರ್ಗೆಯವನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಅಷ್ಟೇ ಅಲ್ಲ, ಅತ್ತ ಬಿಜೆಪಿಯಿಂದಲೂ ಅದೇ ರೀತಿಯ ಮಾತುಗಳು ಕೇಳಿಬರುತ್ತಿವೆ. ಅಲ್ಲಿನ ನಾಯಕರೇ ಒತ್ತಾಯಿಸುತ್ತಿದ್ದಾರೆ. ಪ್ರತಿಪಕ್ಷಗಳ ಮಾತನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ತಮ್ಮೊಳಗೆ ಇರುವ ದಲಿತ ಹಾಗೂ ಹಿಂದುಳಿದ ವರ್ಗಗಳ ಶಾಸಕರ ಮಾತನ್ನು ಅಷ್ಟು ಸುಲಭವಾಗಿ ನಿರ್ಲಕ್ಷ್ಯ ಮಾಡಲು ಹೈಕಮಾಂಡ್ ಹೋಗಲ್ಲ ಎಂದೂ ಹೇಳಲಾಗುತ್ತಿದೆ.
ಮುಡಾ ಹಗರಣ ಬೆಳಕಿಗೆ ಬಂದು ಸಿಎಂ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಡ ಹಾಕುತ್ತಿದ್ದಾಗಲೂ ಪ್ರತಿಕ್ರಿಯಿಸಿದ್ದ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಹೇಳಿದ್ದರು.