Tumkur, Tumakuru : ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ನೌಕರರ ಫೆಡರೇಷನ್‌ನ ಪದಾಧಿಕಾರಿಗಳು ಬಿಸಿಯೂಟ ತಯಾರಕರಿಗೆ (Midday Meals) ಕನಿಷ್ಠ ವೇತನವನ್ನು(Minimum wage) ಕಲ್ಪಿಸುವಂತೆ ಒತ್ತಾಯಿಸಿ ಶುಕ್ರವಾರ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪಗೆ ಮನವಿ ಪತ್ರ ಸಲ್ಲಿಸಿದರು.
ಬಿಸಿಯೂಟ ನೌಕರರ ಫೆಡರೇಷನ್‌ನ ಜಿಲ್ಲಾ ಘಟಕದ ಉಪಾಧ್ಯಕ್ಷ ಕಂಬೇಗೌಡ ಮಾತನಾಡಿ ” ಶಾಲೆಗಳಲ್ಲಿ ಅಡುಗೆ ತಯಾರಕರಾಗಿ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆಯವರಿಗೆ ತಿಂಗಳಿಗೆ ₹2,700, ಸಹಾಯಕ ಅಡುಗೆಯವರಿಗೆ ₹2,600 ನೀಡಲಾಗುತ್ತಿದೆ. ಇದು ಅವರ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ. ‘ಬಿಸಿಯೂಟ ತಯಾರಕರಿಗೆ ಕೇಂದ್ರ ಸರ್ಕಾರದ 2022 ರ ಬಜೆಟ್‌ನಲ್ಲಿ ವೇತನ ಹೆಚ್ಚಿಸುವಂತೆ ತಹಸೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಈ ಬಗ್ಗೆ ಯಾವುದೇ ಕ್ರಮಕೈಗೊಳ್ಳದೆ ಬಿಸಿಯೂಟ ತಯಾರಕರನ್ನು ಕಡೆಗಣಿಸಲಾಗಿದೆ ” ಎಂದು ಹೇಳಿದರು.
ಬಿಸಿಯೂಟ ನೌಕರರ ಫೆಡರೇಷನ್ ಜಿಲ್ಲಾ ಸಂಚಾಲಕರಾದ ಎ.ಬಿ.ಉಮಾದೇವಿ, ಸಾವಿತ್ರಮ್ಮ, ಪದಾಧಿಕಾರಿಗಳಾದ ವನಜಾಕ್ಷಿ, ರಾಧಮ್ಮ, ಉನ್ನೀಸಾ ಉಪಸ್ಥಿತರಿದ್ದರು.