back to top
17.8 C
Bengaluru
Thursday, February 5, 2026
HomeKarnatakaChikkaballapuraಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರು ಆರೋಪಿಗಳಿಗೆ 20 ವರ್ಷ ಜೈಲು

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರು ಆರೋಪಿಗಳಿಗೆ 20 ವರ್ಷ ಜೈಲು

- Advertisement -
- Advertisement -

Sidlaghatta : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (Sexual Assault) ನಡೆಸಿದ ಇಬ್ಬರು ಆರೋಪಿಗಳಿಗೆ ಜಿಲ್ಲಾ ಒಂದನೇ ಎಫ್‌ಟಿಎಸ್‌ಸಿ ನ್ಯಾಯಾಲಯವು (FTSC Court) ಮಹತ್ವದ ತೀರ್ಪು ನೀಡಿದ್ದು, 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ತಲಾ ₹50 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಶಿಡ್ಲಘಟ್ಟ ತಾಲ್ಲೂಕಿನ ಒಂದು ಹಳ್ಳಿಯಲ್ಲಿ 2021ರ ಸೆಪ್ಟೆಂಬರ್‌ನಲ್ಲಿ ಈ ಘಟನೆ ನಡೆದಿತ್ತು. ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐ ಧರ್ಮೇಗೌಡ ಅವರು ತನಿಖೆ ನಡೆಸಿ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ನ್ಯಾಯಾಧೀಶೆ ಶಾರದ ಬಿ. ಅವರು ಮೊದಲ ಮತ್ತು ಎರಡನೇ ಆರೋಪಿಗೆ ಈ ಕಠಿಣ ಶಿಕ್ಷೆಯನ್ನು ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಲಕ್ಷ್ಮಿನರಸಿಂಹಪ್ಪ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು. ಈ ತೀರ್ಪು ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಗಟ್ಟಿ ಸಂದೇಶ ನೀಡಿದಂತಾಗಿದೆ.

For Daily Updates WhatsApp ‘HI’ to 7406303366

The post ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರು ಆರೋಪಿಗಳಿಗೆ 20 ವರ್ಷ ಜೈಲು appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page