Somwarpet, Coorg (Kodagu) : ಸೋಮವಾರಪೇಟೆ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ (Sri Kumar Lingeshwara Temple Shanthalli) 63ನೇ ವರ್ಷದ ವಾರ್ಷಿಕ ಮಹಾ ರಥೋತ್ಸವವನ್ನು (Maha Rathotsava) Covid-19 ಮಾರ್ಗಸೂಚಿಯಿಂದಾಗಿ ದೇವಾಲಯ ಸಮಿತಿ ಹಾಗೂ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಉತ್ಸವಮೂರ್ತಿಯನ್ನು ಸಾಂಕೇತಿಕವಾಗಿ ಎಳೆಯುವ ಮೂಲಕ ಸರಳವಾಗಿ ಶ್ರದ್ಧಾಭಕ್ತಿಯಿಂದ ಭಾನುವಾರ ಆಚರಿಸಲಾಯಿತು.
ಜಾತ್ರೆ ಪ್ರಯುಕ್ತ ದೇವಾಲಯದಲ್ಲಿ ಕರುವಿನ ಹಬ್ಬ, ಗರುಡಗಂಬದಲ್ಲಿ ತುಪ್ಪದ ನಂದಾದೀಪ ಬೆಳಗುವುದು, ಪುಷ್ಪಗಿರಿ ಬೆಟ್ಟದಲ್ಲಿರುವ ಪುರಾತನ ದೇವಾಲಯದಲ್ಲಿ ದೀಪೋತ್ಸವ, ಅರಸುಬಲ ಸೇವೆ ಸೇರಿದಂತೆ ಪ್ರತಿದಿನ ಗ್ರಾಮಸ್ಥರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಕ ಕಾರ್ಯಗಳು ನಡೆದವು.
ಧರ್ಮದರ್ಶಿ ಮಂಡಳಿ ಅಧ್ಯಕ್ಷ ಲೋಕೇಶ್, ಉಪಾಧ್ಯಕ್ಷ ಜಿ.ಡಿ. ಬಸವರಾಜು, ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೇಶವಕಾಮತ್ ಪೂಜೆಯಲ್ಲಿ ಪಾಲ್ಗೊಂಡಿದ್ದರು.