
Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಮಂಗಳವಾರ ಶಾಶ್ವತ ನೀರಾವರಿ ಹೋರಾಟ ಸಮಿತಿ (Shashwata Neeravari Horata samithi) ಮತ್ತು ಯುವಶಕ್ತಿ ವತಿಯಿಂದ ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ಅವರ ನೆನಪಿನಲ್ಲಿ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 60ಕ್ಕೂ ಹೆಚ್ಚು ಸಂಘಟನೆಗಳ ಪ್ರಮುಖ ಹೋರಾಟಗಾರರ ಸಮಾಲೋಚನಾ ಸಭೆ (Consultation meeting) ನಡೆಸಲಾಯಿತು.
ಸಭೆಯಲ್ಲಿ ಮೂರು ದಶಕಗಳಿಂದಲೂ ಬಯಲು ಸೀಮೆಯ ಮೂರು ಜಿಲ್ಲೆಗಳಲ್ಲಿ ಶಾಶ್ವತ ನೀರಾವರಿಗಾಗಿ ಹೋರಾಟಗಳನ್ನು ನಡೆಸುತ್ತಿದ್ದರೂ ನಿರೀಕ್ಷಿತ ಫಲ ದೊರೆತಿಲ್ಲ. ಆದ್ದರಿಂದ ಮತ್ತೊಂದು ಸುತ್ತಿನ ಹೋರಾಟ ನಡೆಸಬೇಕು ಎಂದು ಅಭಿಪ್ರಾಯಪಟ್ಟ ಮುಖಂಡರು ಸರ್ಕಾರದ ಗಮನ ಸೆಳೆಯುವ ರೀತಿಯಲ್ಲಿ ಹೊಸ ಬಗೆಯಲ್ಲಿ ಹೋರಾಟದ ರೂಪುರೇಷೆಗಳನ್ನು ರೂಪಿಸುವ ಬಗ್ಗೆ ಚರ್ಚೆಗಳನ್ನು ನಡೆಸಿ ತೆಲಂಗಾಣ ಹೋರಾಟ ಮಾದರಿಯಲ್ಲಿಯೇ ನೀರಿಗಾಗಿ ಹೋರಾಟ ಸಂಘಟಿಸಬೇಕು ಎಂದು ಪ್ರತಿಪಾದಿಸಿದರು.
ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ, ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ, ರೈತ ಸಂಘದ ಜಿಲ್ಲಾ ಅಧ್ಯಕ್ಷ ಲಕ್ಷ್ಮಿನಾರಾಯಣ ಮುಂತಾದವರು ಸಭೆಯಲ್ಲಿ ಭಾಗವಹಿಸಿದರು.
For Daily Updates WhatsApp ‘HI’ to 7406303366
The post ತೆಲಂಗಾಣ ಹೋರಾಟ ಮಾದರಿಯಲ್ಲಿಯೇ ನೀರಿಗಾಗಿ ಹೋರಾಟ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.