![Sheikh Hasina Sheikh Hasina](https://kannadatopnews.com/wp-content/uploads/2025/02/Photoshop_Online-news-copy-80.jpg)
ಭಾರತದಲ್ಲಿ ಶೇಖ್ ಹಸೀನಾ (Sheikh Hasina) ನೀಡಿದ ಹೇಳಿಕೆಗಳ ಬಗ್ಗೆ ಬಾಂಗ್ಲಾದೇಶವು (Bangladesh) ಆಕ್ಷೇಪ ವ್ಯಕ್ತಪಡಿಸಿದ ನಂತರ, ಭಾರತದ ವಿದೇಶಾಂಗ ಸಚಿವಾಲಯವು ದೆಹಲಿಯ ಬಾಂಗ್ಲಾದೇಶ ಹಂಗಾಮಿ ಹೈಕಮಿಷನರ್‌ಗೆ ಸಮನ್ಸ್ ಜಾರಿ ಮಾಡಿದೆ. ಮೋದಿ ಸರ್ಕಾರ ಶೇಖ್ ಹಸೀನಾ ಹೇಳಿಕೆಗಳನ್ನು ಅವರ ವೈಯಕ್ತಿಕ ಅಭಿಪ್ರಾಯವೆಂದು ಪರಿಗಣಿಸಿದ್ದು, ಭಾರತ ಇದರೊಂದಿಗೆ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಭಾರತವು ಬಾಂಗ್ಲಾದೇಶದೊಂದಿಗೆ ಸದೃಢ ಮತ್ತು ಪರಸ್ಪರ ಪ್ರಯೋಜನಕಾರಿ ಸಂಬಂಧವನ್ನು ಬಯಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಆದರೆ, ಬಾಂಗ್ಲಾದೇಶದ ಅಧಿಕಾರಿಗಳು ಭಾರತವನ್ನು ನಕಾರಾತ್ಮಕವಾಗಿ ಚಿತ್ರಿಸುತ್ತಿರುವುದು ವಿಷಾದನೀಯ ಎಂದು ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
77 ವರ್ಷದ ಶೇಖ್ ಹಸೀನಾ ಕಳೆದ ವರ್ಷ ಭಾರತಕ್ಕೆ ಬಂದಿದ್ದು, ಬಾಂಗ್ಲಾದೇಶದ ವಿದ್ಯಾರ್ಥಿ ಪ್ರತಿಭಟನೆಗಳಿಂದ ಅವಾಮಿ ಲೀಗ್ ಸರ್ಕಾರ ಪತನಗೊಂಡ ನಂತರ ರಾಜೀನಾಮೆ ನೀಡಿ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.
ಢಾಕಾದಲ್ಲಿನ ತಮ್ಮ ತಂದೆಯ ಮನೆ ಮೇಲೆ ನಡೆದ ದಾಳಿಯ ಕುರಿತು ಶೇಖ್ ಹಸೀನಾ ಭಾವನಾತ್ಮಕ ಪ್ರತಿಕ್ರಿಯೆ ನೀಡಿದ್ದರು. ಅವರು “ಇತಿಹಾಸ ತನ್ನ ಸೇಡು ತೀರಿಸಿಕೊಳ್ಳುತ್ತದೆ” ಎಂದು ಹೇಳಿದ್ದರಿಂದ ಉದ್ವಿಗ್ನತೆ ಹೆಚ್ಚಳವಾಯಿತು.
ಭಾರತದಲ್ಲಿರುವ ಶೇಖ್ ಹಸೀನಾ ನೀಡಿದ ಹೇಳಿಕೆಗಳನ್ನು ಖಂಡಿಸಿ, ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯವು ದೆಹಲಿಯ ಭಾರತೀಯ ಹಂಗಾಮಿ ಹೈಕಮಿಷನರ್‌ಗೆ ತೀವ್ರ ಪ್ರತಿಭಟನೆ ಸಲ್ಲಿಸಿದೆ. ಭಾರತವು ಶೇಖ್ ಹಸೀನಾ ಪ್ರಚೋದನಕಾರಿ ಹೇಳಿಕೆಗಳನ್ನು ನಿಯಂತ್ರಿಸಬೇಕು ಎಂದು ವಿನಂತಿಸಿದೆ.