Shivamogga, Karnataka : ಶಿವಮೊಗ್ಗದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಮೊದಲ ವಿಮಾನದೊಂದಿಗೆ, ಶಿವಮೊಗ್ಗ ವಿಮಾನ ನಿಲ್ದಾಣವು ಆಗಸ್ಟ್ 11 ರಂದು ಕಾರ್ಯಾರಂಭ ಮಾಡಲು ಸಿದ್ಧವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. ಇಂಡಿಗೋ ಏರ್‌ಲೈನ್ಸ್ ಅಧಿಕಾರಿಗಳು ಇತ್ತೀಚೆಗಷ್ಟೇ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದು, ಬಸ್ ಸೇವೆಗಳು ಸೇರಿದಂತೆ ಅದರ ಸೌಲಭ್ಯಗಳನ್ನು ಪರಿಶೀಲಿಸಿದ್ದಾರೆ.
ವಿಮಾನ ನಿಲ್ದಾಣದ ಅಭಿವೃದ್ಧಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜನ್ಮದಿನ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಗೊಂಡಿತ್ತು.
ಇಂಡಿಗೋ ಏರ್‌ಲೈನ್ಸ್ ಮುಂದಿನ ದಿನಗಳಲ್ಲಿ ಹೊಸ ದೆಹಲಿ ಮತ್ತು ಮುಂಬೈನಂತಹ ಇತರ ನಗರಗಳಿಗೆ ವಿಮಾನಗಳನ್ನು ಪರಿಚಯಿಸುವ ಯೋಜನೆಯನ್ನು ಹೊಂದಿದೆ ಎಂದು ಮೂಲಗಳು ಬಹಿರಂಗಪಡಿಸಿವೆ. ವಿಮಾನ ನಿಲ್ದಾಣಕ್ಕೆ ಅಂತರರಾಷ್ಟ್ರೀಯ ಕೋಡ್ RQY ಅನ್ನು ನಿಗದಿಪಡಿಸಲಾಗಿದೆ. ಶಿವಮೊಗ್ಗ-ಬೆಂಗಳೂರು ನಡುವಿನ ಪ್ರಯಾಣ ದರದ ಬಗ್ಗೆ ಕೇಳಿದಾಗ ರಾಘವೇಂದ್ರ ಅವರು ಪ್ರತಿ ವ್ಯಕ್ತಿಗೆ 2,500 ರಿಂದ 3,000 ರೂ. ನಿಗದೋಪಾದಿಸಲಾಗಿದೆ ಅಂದಿದ್ದಾರೆ. ಶಿವಮೊಗ್ಗ ಜಿಲ್ಲೆಯು ಜೋಗ್ ಫಾಲ್ಸ್ ಮತ್ತು ಹಲವಾರು ಧಾರ್ಮಿಕ ಸ್ಥಳಗಳಂತಹ ಜನಪ್ರಿಯ ಆಕರ್ಷಣೆಗಳಿಗೆ ನೆಲೆಯಾಗಿದೆ. ಈ ವಿಮಾನ ನಿಲ್ದಾಣವು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದ್ದಾರೆ.