ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 (ICC Champions Trophy 2025) ಟೂರ್ನಿಯ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಹೈವೋಲ್ಟೇಜ್ ಪಂದ್ಯ ಫೆಬ್ರವರಿ 23ರಂದು ದುಬೈನಲ್ಲಿ ನಡೆಯಲಿದೆ. ಪಾಕಿಸ್ತಾನ ನ್ಯೂಜಿಲೆಂಡ್ ವಿರುದ್ಧ 60 ರನ್‌ಗಳ ಹೀನಾಯ ಸೋಲಿಗೆ ಗುರಿಯಾದ ನಂತರ, ಸೆಮಿಫೈನಲ್ ರೇಸ್ ನಲ್ಲಿ ಉಳಿಯಲು ಭಾರತವನ್ನು ಸೋಲಿಸಲೇಬೇಕಾದ ಪರಿಸ್ಥಿತಿ ಎದುರಿಸುತ್ತಿದೆ.
ಈ ಹಿನ್ನಲೆಯಲ್ಲಿ, ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಈ ಪಂದ್ಯವನ್ನು ‘ಮಾಡು ಇಲ್ಲವೇ ಮಡಿ’ ಸೆಣಸಾಟವೆಂದು ವರ್ಣಿಸಿದ್ದಾರೆ. ಪಾಕಿಸ್ತಾನವು ಗೆಲ್ಲಲು ಶಕ್ತಿಯುತ ಆಟವಾಡಬೇಕೆಂದು ಅಭಿಪ್ರಾಯಪಟ್ಟ ಅವರು, ಈ ಪಂದ್ಯದ ಫಲಿತಾಂಶ ಪಾಕಿಸ್ತಾನದ ಭವಿಷ್ಯ ನಿರ್ಧರಿಸುವಂತೆ ಮಾಡಲಿದೆ ಎಂದಿದ್ದಾರೆ.
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್.
ಪಾಕಿಸ್ತಾನ: ಇಮಾಮ್-ಉಲ್-ಹಕ್, ಬಾಬರ್ ಅಜಮ್, ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (ನಾಯಕ ಮತ್ತು ವಿಕೆಟ್ ಕೀಪರ್), ಸಲ್ಮಾನ್ ಆಘಾ, ತಯ್ಯಬ್ ತಾಹಿರ್, ಖುಶ್ದಿಲ್ ಶಾ, ಶಾಹೀನ್ ಅಫ್ರಿದಿ, ನಸೀಮ್ ಶಾ, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್.
ಈ ಮಹತ್ವದ ಪಂದ್ಯದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದನ್ನು ಕಾದು ನೋಡಬೇಕು!








