Home Chikkaballapura Sidlaghatta ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

219

Kothanur, Sidlaghatta : ರಾಜ್ಯ ಸರ್ಕಾರ ಹೈನುಗಾರರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು 5 ರೂಗಳಿಂದ 10 ರೂಗಳಿಗೆ ಹೆಚ್ಚಿಸುವ ಮೂಲಕ ರಾಜ್ಯದಲ್ಲಿ ಹಾಲು ಉತ್ಪಾದನೆಯನ್ನು ಮತ್ತಷ್ಟು ಹೆಚ್ಚಿಸಲು ನೆರವಾಗಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

ತಾಲ್ಲೂಕಿನ ಕೊತ್ತನೂರು ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ ಹಾಗು ಗ್ರಾಮದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸುಮಾರು 7 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯದಲ್ಲಿ 1 ಕೋಟಿ 5 ಲಕ್ಷ ಲೀ ಹಾಲು ಮಾತ್ರ ಉತ್ಪಾದನೆಯಾಗುತ್ತಿದ್ದ ಜನಸಂಖ್ಯೆಗನುಗುಣವಾಗಿ ಹಾಲಿನ ಉತ್ಪಾದನೆಯಾಗುತ್ತಿಲ್ಲ. ವೈಜ್ಞಾನಿಕವಾಗಿ ಪ್ರತಿಯೊಬ್ಬರಿಗೂ ದಿನವೊಂದಕ್ಕೆ 250-300 ಮಿ.ಲೀ ಹಾಲಿನ ಅಗತ್ಯವಿದ್ದು ಸರ್ಕಾರ ಹೈನುಗಾರರಿಗೆ ಹೆಚ್ಚಿನ ಪ್ರೋತ್ಸಾಹಧನ ನೀಡಿದ್ದೇ ಆದಲ್ಲಿ ಮತ್ತಷ್ಟು ಹಾಲಿನ ಉತ್ಪಾದನೆಯಾಗಲಿದೆ ಎಂದರು.

ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಬರುವ ಲಾಭಾಂಶದಲ್ಲಿ ಹೆಚ್ಚಿನ ಬೋನಸ್‌ನ್ನು ಹಾಲು ಉತ್ಪಾದಕರಿಗೆ ನೀಡಬೇಕು ಎಂದರು.

ಕೋಚಿಮುಲ್ ಮಾಜಿ ನಿರ್ದೇಶಕ, ಪಿ.ಎಲ್‌.ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ ಮಾತನಾಡಿ, ಹಾಲು ಉತ್ಪಾದಕರು ಗುಣಮಟ್ಟದ ಹಾಲು ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಬೇಕು. ಗುಣಮಟ್ಟದ ಹಾಲು ಪೂರೈಕೆ ಮಾಡುವ ಮೂಲಕ ಸಹಕಾರ ಸಂಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕೆಂದು ಹೇಳಿದರು.

ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೆ.ಪಿ.ಮಂಜುನಾಥ್, ಉಪಾಧ್ಯಕ್ಷ ಉತ್ತನಳ್ಳಪ್ಪ, ಮುಖಂಡರಾದ ಹುಜಗೂರು ರಾಮಣ್ಣ, ಆನೂರು ವಿಜಯೇಂದ್ರ, ನಾಗಮಂಗಲ ಶ್ರೀನಿವಾಸಗೌಡ, ಕೆ.ಎನ್ ಸುಬ್ಬಾರೆಡ್ಡಿ ಸೇರಿದಂತೆ ಸಮಘದ ನಿರ್ದೇಶಕರು ಹಾಗೂ ಸಿಬ್ಬಂದಿ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page