back to top
25.9 C
Bengaluru
Tuesday, February 24, 2026
HomeKarnatakaVijayapuraಸಿಂದಗಿ ಬಾಲಕಿಯರ ಹಾಸ್ಟೆಲ್ ಕಾಮಗಾರಿಗೆ ಭೂಮಿಪೂಜೆ

ಸಿಂದಗಿ ಬಾಲಕಿಯರ ಹಾಸ್ಟೆಲ್ ಕಾಮಗಾರಿಗೆ ಭೂಮಿಪೂಜೆ

- Advertisement -
- Advertisement -

Sindagi, Vijayapura : ಸಿಂದಗಿ ಪಟ್ಟಣದ ಮಹಾತ್ಮ ಗಾಂಧಿ ವೃತ್ತದ (Mahatma Gandhi Circle) ಬಳಿ ಸಮಾಜಕಲ್ಯಾಣ ಇಲಾಖೆಯಿಂದ ನಿರ್ಮಿಸಲಾಗುತ್ತಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ (Girls Hostel) ಕಟ್ಟಡ ಕಾಮಗಾರಿ ಭೂಮಿಪೂಜೆಯನ್ನು (Construction Groundbreaking) ಶಾಸಕ ರಮೇಶ ಭೂಸನೂರ ಮಾಡಿದರು.

ಪಟ್ಟಣದ ಸೌಂದರ್ಯೀಕರಣಕ್ಕಾಗಿ ₹150 ಕೋಟಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದ್ದು ಪಟ್ಟಣದ ಸಮಗ್ರ ಅಭಿವೃದ್ದಿಗಾಗಿ ಮುಂದಿನ 15 ತಿಂಗಳುಗಳ ಅವಧಿಯಲ್ಲಿ ವೇಗವಾಗಿ ಕೆಲಸಮಾಡಲು ಪ್ರಯತ್ನಿಸುತ್ತೇನೆ. ಅಂಬೇಡ್ಕರ್ ವೃತ್ತದಿಂದ ಬಸ್ ನಿಲ್ದಾಣ ಮಾರ್ಗವಾಗಿ ಬಸ್ ಡಿಪೋವರೆಗೆ ಡಬಲ್ ರಸ್ತೆ ನಿರ್ಮಾಣ ಮಾಡಲಾಗುವುದು. ಬಸವೇಶ್ವರ ವೃತ್ತದಿಂದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಮಹಾತ್ಮ ಗಾಂಧಿ ವೃತ್ತದವರೆಗಿನ ಜೋಡಿ ರಸ್ತೆ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಅದನ್ನು ಪೂರ್ಣಗೊಳಿಸಲಾಗುವುದು. ’ ಎಂದು ಶಾಸಕರು ತಿಳಿಸಿದರು.

ಸಂಸದ ರಮೇಶ ಜಿಗಜಿಣಗಿ, ಲಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ ಮಾತನಾಡಿದರು. ತಹಶೀಲ್ದಾರ್ ಸಂಜೀವಕುಮಾರ ದಾಸರ, ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಸಹಾಯಕ ನಿರ್ದೇಶಕಿ ನಿರ್ಮಲಾ ಭೂಸಗೊಂಡ, ತಾಲ್ಲೂಕು ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಬಿ.ಎಚ್. ಬಿರಾದಾರ, ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಮಾದುಗೋಳಕರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page