
Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೌಶಲಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ (Skill development KDP Meeting) ಕರ್ನಾಟಕ ಕೌಶಲಾಭಿವೃದ್ಧಿ ನಿಗಮದ ಅಧ್ಯಕ್ಷೆ ಶಿವಕಾಂತಮ್ಮ ನಾಯಕರವರು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿವಕಾಂತಮ್ಮ ನಾಯಕರವರು ” ಶಾಲಾ ಮತ್ತು ಕಾಲೇಜುಗಳಲ್ಲಿ ಕೌಶಲಾಭಿವೃದ್ಧಿ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಶಾಲಾ ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲಗಳನ್ನು ಕಲಿಯುವ ವ್ಯವಸ್ಥೆ ಇರಬೇಕು. ಯುವಕರಲ್ಲಿ ಹೊಸ ಕೌಶಲಗಳನ್ನು ಕಲಿಯುವ ಜೊತೆಗೆ ಅಸ್ತಿತ್ವದಲ್ಲಿರುವ ಕೌಶಲಗಳನ್ನು ಸುಧಾರಿಸುವುದು ಉದ್ಯೋಗಾವಕಾಶ ಹೆಚ್ಚಿಸಲು ಹಾಗೂ ದೇಶ-ಸಮಾಜದ ಅಭಿವೃದ್ಧಿಗೆ ಅಗತ್ಯವಿದೆ” ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅತಿಕ್ ಪಾಷಾ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಎಂ. ಪ್ರಸಾದ್, ಕೈಗಾರಿಕಾ ಜಂಟಿ ನಿರ್ದೇಶಕ ಶ್ರೀನಿವಾಸರೆಡ್ಡಿ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಎಚ್.ಎನ್. ರಂಗಪ್ಪ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯ ನಂತರ, ಶಿವಕಾಂತಮ್ಮ ನಾಯಕ ಅವರು ನಗರದ ಹೊರವಲಯದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಬಳಿಕ ಚಿಕ್ಕಬಳ್ಳಾಪುರ ತಾಲ್ಲೂಕು ಅಂಗಟ್ಟದಲ್ಲಿರುವ ಮೋಕ್ಷಗುಂಡಂ ಸರ್. ಎಂ. ವಿಶ್ವೇಶ್ವರಯ್ಯ ಮಾಸ್ಟರ್ ತರಬೇತಿ ಸಂಸ್ಥೆಗೆ ಭೇಟಿ ನೀಡಿ, ನಲ್-ಜಲ್ ಮಿತ್ರ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳೊಂದಿಗೆ ಮಾತುಕತೆ ನಡೆಸಿದರು.
For Daily Updates WhatsApp ‘HI’ to 7406303366
The post ಶಾಲೆ-ಕಾಲೇಜುಗಳಲ್ಲಿ ಕೌಶಲಾಭಿವೃದ್ಧಿ ಅಗತ್ಯ – ಶಿವಕಾಂತಮ್ಮ ನಾಯಕ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.