
Mangaluru: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಮತ್ತು ಹಲವರ ಮೇಲೆ ವಾಮಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯ ಹಿಂದೆ ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡವಿರುವ ಮಾಹಿತಿ ಲಭ್ಯವಾಗಿದೆ.
ಈ ಸಂಬಂಧ ಈಗಾಗಲೇ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಅಶೋಕ್ ನಗರ ಸ್ಮಶಾನದಲ್ಲಿ ಇಬ್ಬರು ಆರೋಪಿಗಳು ಕಾಳಿಕಾಂಬ ಗುಡಿಯ ಅರ್ಚಕರಿಗೆ ತಿಳಿಸದೆ ಕುರಿಗಳನ್ನು ಬಲಿ ನೀಡಿ ವಾಮಾಚಾರ ನಡೆಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.
ವಾಮಾಚಾರ ಪ್ರಕರಣದಲ್ಲಿ ಉಡುಪಿಯ ಮಹಿಳಾ ಸಬ್ಇನ್ಸ್ಪೆಕ್ಟರ್ ಹೆಸರು ಥಳುಕು ಹಾಕಿಕೊಂಡಿದೆ. ರಾಮಸೇನಾ ಮುಖಂಡ ಪ್ರಸಾದ್ ಅತ್ತಾವರ್ ಪತ್ನಿ ಸುಮಾ ನಂಟಿದೆ ಎಂದು ಹೇಳಲಾಗಿದೆ. ಮಹಿಳಾ ಪೊಲೀಸ್ ಅಧಿಕಾರಿ ನಂಟಿನ ಬಗ್ಗೆ ಖುದ್ದಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.