
Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕೈವಾರ ಯೋಗಿನಾರೇಯಣ ಯತೀಂದ್ರರ ಜಯಂತಿಯನ್ನು (sri kaiwara yogi nareyana jayanti) ತಾತ್ತಯ್ಯನವರ ದೇವಾಲಯಗಳಲ್ಲಿ ವಿವಿಧ ಪೂಜೆಗಳು, ಕೀರ್ತನೆ, ಭಜನೆ ಮತ್ತಿತರ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಸೋಮವಾರ ಕೈವಾರ ಯೋಗಿನಾರೇಯಣ ಯತೀಂದ್ರರ ಜಯಂತಿಯನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ನೇತೃತವಾದಲ್ಲಿ ಆಚರಿಸಲಾಯಿತು. ಚಿಕ್ಕಬಳ್ಳಾಪುರ ನಗರದ ಯೋಗಿ ನಾರೇಯಣ ಯತೀಂದ್ರರ ದೇವಾಲಯದಲ್ಲಿ ಸೋಮವಾರ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.
ಗೌರಿಬಿದನೂರು :
ಗೌರಿಬಿದನೂರು ತಾಲ್ಲೂಕು ಆಡಳಿತದಿಂದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಕೈವಾರ ತಾತಯ್ಯರ ಜಯಂತಿಯನ್ನು ಸೋಮವಾರ ಸರಳವಾಗಿ ಆಚರಿಸಲಾಯಿತು.
For Daily Updates WhatsApp ‘HI’ to 7406303366
The post ಜಿಲ್ಲೆಯಾದ್ಯಂತ ಕೈವಾರ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆ appeared first on Chikkaballapur | ಚಿಕ್ಕಬಳ್ಳಾಪುರ.