Bengaluru: IPL ಟ್ರೋಫಿ ಗೆದ್ದ ಖುಷಿಯಲ್ಲಿ ನಡೆದ ಸಂಭ್ರಮಾಚರಣೆಯ ಸಂದರ್ಭದಲ್ಲಿ, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜೂನ್ 4ರಂದು ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ದುರ್ಘಟನೆಗೆ ಸಂಬಂಧಿಸಿದಂತೆ, RCB ತಂಡ, ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಡಿಎನ್ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ವಿರುದ್ಧ ಕ್ರಿಮಿನಲ್ ಕೇಸ್ (Stampede investigation) ದಾಖಲಿಸಲು ಕರ್ನಾಟಕ ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.
ಇದೆ ವೇಳೆ, ಪೊಲೀಸ್ ಅಧಿಕಾರಿಗಳ ವಿರುದ್ಧವೂ ಇಲಾಖಾ ತನಿಖೆ ನಡೆಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನಗಳನ್ನು ಕೈಗೊಳ್ಳಲಾಯಿತು.
ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಅವರ ಏಕ ಸದಸ್ಯ ತನಿಖಾ ಆಯೋಗ ನೀಡಿದ ವರದಿಯನ್ನಾಧಾರವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ವರದಿಯಲ್ಲಿ RCB, ಡಿಎನ್ಎ, ಕೆಎಸ್ಸಿಎ ಜೊತೆಗೆ ಕೆಲ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯವನ್ನೂ ಉಲ್ಲೇಖಿಸಲಾಗಿತ್ತು.
ಕ್ರಿಮಿನಲ್ ಕೇಸ್ ಹಿನ್ನೆಲೆಯಲ್ಲಿ ಕೆಎಸ್ಸಿಎ ಅಧ್ಯಕ್ಷ ರಘುರಾಮ್ ಭಟ್, ಮಾಜಿ ಕಾರ್ಯದರ್ಶಿ ಎ. ಶಂಕರ್, ಖಜಾಂಚಿ ಜಯರಾಂ, ಆರ್ಸಿಬಿ ತಂಡದ ರಾಜೇಶ್ ಮೆನನ್, ಡಿಎನ್ಎ ಎಂಡಿ ವೆಂಕಟ್ ವರ್ಧನ್ ಹಾಗೂ ಉಪಾಧ್ಯಕ್ಷ ಸುನೀಲ್ ಮಾಥೂರ್ ವಿರುದ್ಧ ಕ್ರಮ ಸಾಧ್ಯತೆ ಇದೆ.
ಅದಷ್ಟೇ ಅಲ್ಲದೆ, ಮಾಜಿ ಪೊಲೀಸ್ ಕಮಿಷನರ್ ಬಿ. ದಯಾನಂದ್, ಐಪಿಎಸ್ ಅಧಿಕಾರಿಗಳು ವಿಕಾಸ್ ಕುಮಾರ್, ಶೇಖರ್, ಎಸಿಪಿ ಬಾಲಕೃಷ್ಣ ಹಾಗೂ ಪಿಐ ಗಿರೀಶ್ ಅವರ ವಿರುದ್ಧವೂ ತನಿಖೆ ಹಾಗೂ ಕ್ರಮ ಕೈಗೊಳ್ಳಲಾಗಲಿದೆ.
ಈ ಘಟನೆ ದೇಶದಾದ್ಯಂತ ಗಮನ ಸೆಳೆದಿದ್ದು, ಸಾರ್ವಜನಿಕ ಆಕ್ರೋಶ ಹಾಗೂ ರಾಜಕೀಯ ವಿವಾದಕ್ಕೂ ಕಾರಣವಾಯಿತು.