Home Sports Cricket IND vs NZ: 2 ನೇ ಪಂದ್ಯದಿಂದ New Zealand ತಂಡದ ಸ್ಟಾರ್ ಆಟಗಾರ ಔಟ್

IND vs NZ: 2 ನೇ ಪಂದ್ಯದಿಂದ New Zealand ತಂಡದ ಸ್ಟಾರ್ ಆಟಗಾರ ಔಟ್

IND vs NZ India New Zealand Cricket Match

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ನಡೆದ ಭಾರತದ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ (IND vs NZ) ನ್ಯೂಝಿಲೆಂಡ್ (New Zealand) ತಂಡ ಅದ್ಭುತ ಪ್ರದರ್ಶನ ನೀಡಿದೆ. ಈ ಅದ್ಭುತ ಪ್ರದರ್ಶನದೊಂದಿಗೆ ಕಿವೀಸ್ (Kiwis) ಪಡೆ ಭಾರತದಲ್ಲಿ 36 ವರ್ಷಗಳ ಬಳಿಕ ಟೆಸ್ಟ್ ಪಂದ್ಯವನ್ನು (Test match) ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದೀಗ ಉಭಯ ತಂಡಗಳು ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದ್ದಾರೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಕೇನ್ ವಿಲಿಯಮ್ಸನ್ ಅಲಭ್ಯರಾಗಲಿದ್ದಾರೆ. ತೊಡೆಸಂದು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಪುಣೆಯಲ್ಲಿ ಜರುಗಲಿರುವ 2ನೇ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಅಕ್ಟೋಬರ್ 24 ರಿಂದ ಶುರುವಾಗಲಿದೆ. ಈ ಪಂದ್ಯವು ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿದೆ. ಇದೀಗ ಈ ಪಂದ್ಯಕ್ಕೆ ವಿಲಿಯಮ್ಸನ್ ಅಲಭ್ಯರಾಗಿರುವ ಕಾರಣ ವಿಲ್ ಯಂಗ್ ತಂಡದಲ್ಲೇ ಮುಂದುವರೆಯಲಿದ್ದಾರೆ.

ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಟೀಮ್ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು. ಅಥವಾ ಸರಣಿ ಸೋಲನ್ನು ತಪ್ಪಿಸಿಕೊಳ್ಳಬೇಕಿದ್ದರೆ 2ನೇ ಪಂದ್ಯದಲ್ಲಿ ಕನಿಷ್ಠ ಡ್ರಾ ಸಾಧಿಸಬೇಕಾದ ಅನಿವಾರ್ಯತೆ ಇದೆ.

ನ್ಯೂಝಿಲೆಂಡ್ ತಂಡವು ಈವರೆಗೆ ಭಾರತ ತಂಡದಲ್ಲಿ ಸರಣಿ ಗೆದ್ದಿಲ್ಲ. ಅದರಲ್ಲೂ ಭಾರತದಲ್ಲಿ ಇದುವರೆಗೆ ಗೆದ್ದಿರುವುದು ಕೇವಲ ಮೂರು ಟೆಸ್ಟ್ ಪಂದ್ಯಗಳನ್ನು ಮಾತ್ರ. ಇದೀಗ 36 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್ ಪಂದ್ಯ ಗೆದ್ದಿರುವ ನ್ಯೂಝಿಲೆಂಡ್ಗೆ ಇತಿಹಾಸ ನಿರ್ಮಿಸಲು ಉತ್ತಮ ಅವಕಾಶವಿದೆ.

ಇದಕ್ಕಾಗಿ 2ನೇ ಅಥವಾ 3ನೇ ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಿದರೆ ಸಾಕು. ಅಥವಾ ಎರಡೂ ಪಂದ್ಯಗಳನ್ನು ಡ್ರಾನಲ್ಲಿ ಅಂತ್ಯಗೊಳಿಸಿದರೂ ನ್ಯೂಝಿಲೆಂಡ್ ತಂಡವು 1-0 ಅಂತರದಿಂದ ಸರಣಿ ಗೆಲ್ಲಬಹುದು. ಹೀಗಾಗಿಯೇ ಟೀಮ್ ಇಂಡಿಯಾ ಪಾಲಿಗೆ ಮುಂದಿನ ಎರಡೂ ಮ್ಯಾಚ್ಗಳು ತುಂಬಾ ಮಹತ್ವದ್ದು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version