ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್‌ನಲ್ಲಿ ಮೊದಲ ಇನಿಂಗ್ಸ್‌ನಲ್ಲಿ 518 ರನ್ ಗಳಿಸಿ ಡಿಕ್ಲೇರ್ ಘೋಷಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ನಾಯಕ ಶುಭ್ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡರು.
ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್‌ಗೆ 58 ರನ್ ಗಳಿಸಿದ ಬಳಿಕ ಕೆಎಲ್ ರಾಹುಲ್ (38) ಔಟಾದರು. ನಂತರ ಯಶಸ್ವಿ ಜೈಸ್ವಾಲ್ ಮತ್ತು ಸಾಯಿ ಸುದರ್ಶನ್ ಶತಕದ ಜೊತೆಯಾಟವಾಡಿದರು. ಸಾಯಿ ಸುದರ್ಶನ್ 87 ರನ್ ಗಳಿಸಿದ ನಂತರ ಔಟಾದರು.
ಯಶಸ್ವಿ ಜೈಸ್ವಾಲ್ ಮೊದಲ ದಿನದಾಟದ ಅಂತ್ಯಕ್ಕೆ 173 ರನ್ ಅಜೇಯರಾಗಿ ಉಳಿದರು. ಇದರ ನೆರವಿನಿಂದ ಟೀಮ್ ಇಂಡಿಯಾ 2 ವಿಕೆಟ್ ಕಳೆದುಕೊಂಡು 318 ರನ್ ಮಾಡಿತು.
ದ್ವಿತೀಯ ದಿನದಾಟದ ಆರಂಭದಲ್ಲಿ ಯಶಸ್ವಿ ಜೈಸ್ವಾಲ್ (175) ರನೌಟ್ ಆಗಿದ್ದು, ಟೀಮ್ ಇಂಡಿಯಾ ಮುಖ್ಯ ಬ್ಯಾಟ್ಸ್‌ಮನ್ ಶುಭ್ಮನ್ ಗಿಲ್ 196 ಎಸೆತಗಳಲ್ಲಿ 16 ಫೋರ್ ಮತ್ತು 2 ಸಿಕ್ಸರ್‌ಗಳೊಂದಿಗೆ ಅಜೇಯ 128 ರನ್ ಬಾರಿಸಿದರು.
ಗಿಲ್ ಅವರಿಗೆ ಉತ್ತಮ ಬೆಂಬಲ ನೀಡಿದ ನಿತೀಶ್ ಕುಮಾರ್ ರೆಡ್ಡಿ 43 ರನ್ ಮತ್ತು ಧ್ರುವ್ ಜುರೆಲ್ 44 ರನ್ ಬಾರಿಸಿದ ಬಳಿಕ ಟೀಮ್ ಇಂಡಿಯಾ ಡಿಕ್ಲೇರ್ ಘೋಷಿಸಿತು. ಭಾರತ ಮೊದಲ ಇನಿಂಗ್ಸ್‌ನಲ್ಲಿ 5 ವಿಕೆಟ್ ಕಳೆದುಕೊಳ್ಳಿ 518 ರನ್ ಗಳಿಸಿತು.
ಭಾರತ ಪ್ಲೇಯಿಂಗ್ ಇಲೆವೆನ್: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭ್ಮನ್ ಗಿಲ್ (ನಾಯಕ), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್: ಜಾನ್ ಕ್ಯಾಂಪ್ಬೆಲ್, ತೇಜ್ನರೈನ್ ಚಂದ್ರಪಾಲ್, ಅಲಿಕ್ ಅಥನಾಝ್, ಶೈ ಹೋಪ್, ರೋಸ್ಟನ್ ಚೇಸ್ (ನಾಯಕ), ಟೆವಿನ್ ಇಮ್ಲಾಚ್ (ವಿಕೆಟ್ ಕೀಪರ್), ಜಸ್ಟಿನ್ ಗ್ರೀವ್ಸ್, ಜೋಮೆಲ್ ವಾರಿಕನ್, ಖಾರಿ ಪಿಯರೆ, ಆಂಡರ್ಸನ್ ಫಿಲಿಪ್, ಜೇಡನ್ ಸೀಲ್ಸ್.








