Hubli : ಹಿಂದೂ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳನ್ನು (Hindu Temples and Religious Institutions) ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ಮಸೂದೆಯನ್ನು (Bill) ಸರ್ಕಾರ ಪರಿಗಣಿಸುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister of Karnataka Basavaraj Bommai) ಬುಧವಾರ ತಿಳಿಸಿದರು. ಹುಬ್ಬಳ್ಳಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ಮಸೂದೆಯನ್ನು ತರುವುದು ಪ್ರಾಥಮಿಕ ಆದ್ಯತೆಯಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿಗಳು ತಮ್ಮ ಆದಾಯವನ್ನು ಅಭಿವೃದ್ಧಿಗೆ ಬಳಸಿಕೊಳ್ಳಲು ಸರ್ಕಾರದ ಅನುಮತಿ ಪಡೆಯಬೇಕೆಂದು ಇರುವ ನಿಯಮಗಳನ್ನು ತೆಗೆಯಲಾಗುವುದು .
ಅದರಂತೆ ಕರ್ನಾಟಕದ ದೇವಾಲಯಗಳು ತಮ್ಮ ವ್ಯವಹಾರಗಳನ್ನು ನಿರ್ವಹಿಸಲು ಮುಕ್ತವಾಗಿರುತ್ತವೆ. ಪಕ್ಷದ ಹಿರಿಯ ನಾಯಕರೊಂದಿಗೆ ಸಮಾಲೋಚಿಸಿದ ನಂತರ ಈ ನಿರ್ಧಾರವನ್ನು ಶೀಘ್ರದಲ್ಲೇ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.