Home News Pakistan ದ ಚೆಕ್‌ಪೋಸ್ಟ್‌ ಮೇಲೆ Terrorist attack

Pakistan ದ ಚೆಕ್‌ಪೋಸ್ಟ್‌ ಮೇಲೆ Terrorist attack

Terrorist Attack on Pakistan Check Post

Peshawar: ಪಾಕಿಸ್ತಾನದ (Pakistan) ಪ್ರಕ್ಷುಬ್ದ ಖೈಬರ್​ ಪಖ್ತುಂಖ್ವಾ (Khyber Pakhtunkhwa) ಪ್ರಾಂತ್ಯದ ಚೆಕ್​ ಪೋಸ್ಟ್​ (check post) ಮೇಲೆ ಉಗ್ರರು (Terrorist) ಗುರುವಾರ ದಾಳಿ ನಡೆಸಿದ್ದಾರೆ. ಕನಿಷ್ಠ ನಾಲ್ವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ದಾರಾಬನ್ ಪ್ರದೇಶದ ಚೆಕ್‌ಪೋಸ್ಟ್‌ನಲ್ಲಿ ದಾಳಿ ನಡೆದಾಗ ಭದ್ರತಾ ಸಿಬ್ಬಂದಿ ದಾಳಿ​ ಮಾಡಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಯೋಧರ ಹೊಸ ತುಕಡಿ ದಾಳಿಕೋರರನ್ನು ಬಂಧಿಸಲು ಬೃಹತ್​ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸದ್ಯ ದಾಳಿಯ ಹೊಣೆಯನ್ನು ಇದುವರೆಗೆ ಯಾವುದೇ ಗುಂಪು ಹೊತ್ತುಕೊಂಡಿಲ್ಲ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version