Home News ಮಾಜಿ ಶಾಸಕ Mohiuddin Bava ಸೋದರ Mumtaz Ali ದೇಹ ಪತ್ತೆ

ಮಾಜಿ ಶಾಸಕ Mohiuddin Bava ಸೋದರ Mumtaz Ali ದೇಹ ಪತ್ತೆ

Mangalore: ಮನೆಯಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ (former MLA Mohiuddin Bava) ಅವರ ಸಹೋದರ ಮುಮ್ತಾಜ್ ಅಲಿ (Mumtaz Ali) ಮೃತದೇಹ ನದಿಯಲ್ಲಿ ಪತ್ತೆಯಾಗಿದೆ.

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ (Mumtaz Ali) ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ.

ಮಂಗಳೂರಿನ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. ಮುಳುಗು ತಜ್ಞರು ಮೃತದೇಹವನ್ನು ಹೊರತೆಗೆದಿದ್ದು ಮೃತದೇಹ ಕಂಡು ಮಾಜಿ ಶಾಸಕ ಮೊಯಿದ್ದೀನ್ ಬಾವಾ ಕಣ್ಣೀರು ಹಾಕಿದ್ದಾರೆ.

ಈ ಕೇಸ್ ಹಿಂದೆ ಮಹಿಳೆಯ ಕೈವಾಡ ಇದೆ ಎಂಬ ವಿಚಾರ ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಸುರತ್ಕಲ್ ಕೃಷ್ಣಾಪುರ ನಿವಾಸಿ ಮಹಿಳೆ ಕಳೆದ ಒಂದು ವರ್ಷದಿಂದ ಮುಮ್ತಾಜ್ ಅಲಿ ಗೆ ಬ್ಲಾಕ್ ಮೇಲ್ ಮಾಡುತ್ತಿದ್ದಳು ಎನ್ನಲಾಗಿದೆ.

ಮುಮ್ತಾಜ್ ಅಲಿ ಖಾಸಗಿ ವಿಡಿಯೋ ಇಟ್ಟುಕೊಂಡು ಮದುವೆ ಆಗುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ವಿಚಾರ ಮನೆಯವರಿಗೆ ಗೊತ್ತಾಗಿ ನಿತ್ಯ ಕಿರಿಕಿರಿಯಾಗುತ್ತಿತ್ತು.

ಇತ್ತೀಚೆಗೆ ಮಸೀದಿ ಕಮಿಟಿ ವಿಚಾರದಲ್ಲಿ ಕಾಟಿಪಳ್ಳದ ಮೂವರು ಯುವಕರು ಆ ಮಹಿಳೆಗೆ ಸಾಥ್ ನೀಡಿ ಹೆಸರು ಕೆಡಿಸಲು ತಯಾರಿ ನಡೆಸಿದ್ದರು. ಇದ್ರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಸದ್ಯ ಘಟನೆ ಸಂಬಂಧ 6 ಜನರ ವಿರುದ್ಧ FIR ದಾಖಲಾಗಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version