Bengaluru: “ನಾನು ಹುಟ್ಟಿದ್ದು ಕಾಂಗ್ರೆಸ್ಸಿಗ, ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ. ನನ್ನ ಪಕ್ಷ ನಿಷ್ಠೆ ಪ್ರಶ್ನಿಸುವವರು ಮೂರ್ಖರು” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದರು.
ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದಕ್ಕಾಗಿ ಕೆಲ ಕಾಂಗ್ರೆಸ್ ನಾಯಕರು ಡಿಕೆ ಶಿವಕುಮಾರ್ ವಿರುದ್ಧ ಟೀಕೆ ಮಾಡಿದ್ದರು. ಬಿಕೆ ಹರಿಪ್ರಸಾದ್ ಅವರು “ಪಕ್ಷದ ಅಧ್ಯಕ್ಷನಾಗಿ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದ್ದರು.
- RSS ಗೀತೆ ಹಾಡಿದ ಕಾರಣಕ್ಕೆ ಕೆಲವರು ಟೀಕಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು,
- “ನಾನು ಹುಟ್ಟಿದ್ದು ಕಾಂಗ್ರೆಸ್ಸಿಗ. ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು” ಎಂದು ತಿರುಗೇಟು ನೀಡಿದರು.
- ಬಿಕೆ ಹರಿಪ್ರಸಾದ್ ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರೂ, ಡಿಕೆಶಿ “ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳಲು ನಾನು ಸಿದ್ಧ” ಎಂದರು.
- ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದು ವಿರೋಧ ಪಕ್ಷದ ಸಿದ್ಧಾಂತವನ್ನು ಅರಿತಿದ್ದೇನೆ ಎಂಬುದನ್ನು ತೋರಿಸಲು ಮಾತ್ರ ಎಂದು ಸ್ಪಷ್ಟಪಡಿಸಿದರು.
ಧರ್ಮದ ವಿಚಾರ: “ನಾನು ಕಾಂಗ್ರೆಸ್‌ನವನಾದರೂ ನನ್ನ ಧರ್ಮವನ್ನು ಬಿಡಲ್ಲ. ಎಲ್ಲಾ ಧರ್ಮಗಳಿಗೆ ಗೌರವವಿದೆ. ಆದರೆ, ಎಲ್ಲಕ್ಕಿಂತ ಮೇಲಾಗಿ ಮಾನವ ಧರ್ಮವೇ ಮುಖ್ಯ ಎಂದು ನಂಬಿದ್ದೇನೆ” ಎಂದು ಹೇಳಿದರು.
ಕಾಂಗ್ರೆಸ್ ನಿಷ್ಠೆ: “ನಾನು ಹೊಸದಾಗಿ ಕಾಂಗ್ರೆಸ್ ಸೇರಿಲ್ಲ. ವಿದ್ಯಾರ್ಥಿ ದಿನಗಳಿಂದಲೇ ಕಾಂಗ್ರೆಸ್‌ನಲ್ಲಿ ಇದ್ದೇನೆ. ನನಗೂ ಗಾಂಧಿ ಕುಟುಂಬಕ್ಕೂ ಭಕ್ತ-ಭಗವಂತನ ಸಂಬಂಧ. ಹೀಗಾಗಿ ನನ್ನ ನಿಷ್ಠೆಯನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ” ಎಂದು ಖಡಕ್ ಹೇಳಿದರು.