
Mumbai : ಜುಲೈ 4 ರಂದು ಉದ್ಯಮಿ ಅನಿಲ್ ಅಂಬಾನಿ (Anil Ambani) ಅವರ ಪತ್ನಿ ಟೀನಾ ಅಂಬಾನಿ (Tina Ambani) ಅವರಿಗೆ ಜಾರಿ ನಿರ್ದೇಶನಾಲಯವು (Enforcement Directorate) ಸಮನ್ಸ್ ನೀಡಿದೆ. ಅವರು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ, 1999 (ಫೆಮಾ) ಅಡಿಯಲ್ಲಿ ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆಯನ್ನು ಒಳಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಧಿಕಾರಿಗಳ ಮುಂದೆ ಹಾಜರಾಗಿದ್ದರು.
ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕಾಗಿ 64 ವರ್ಷ ವಯಸ್ಸಿನ ಅನಿಲ್ ಅಂಬಾನಿ ಅವರನ್ನು 2020 ರಲ್ಲಿ ಜಾರಿ ನಿರ್ದೇಶನಾಲಯ ಪ್ರಶ್ನಿಸಿತ್ತು.
ಅನಿಲ್ ಅಂಬಾನಿ ಅವರು ಎರಡು ಸ್ವಿಸ್ ಬ್ಯಾಂಕ್ ಖಾತೆಗಳಲ್ಲಿ 420 ಕೋಟಿ ರೂಪಾಯಿಗಳ ಅಘೋಷಿತ ಹಣ ಮತ್ತು ತೆರಿಗೆ ವಂಚನೆಗಾಗಿ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಸೇರಿದಂತೆ ಹಿಂದಿನ ಆರೋಪಗಳನ್ನು ಎದುರಿಸಿದ್ದರು. ಇದೀಗ ಅನಿಲ್ ಅಂಬಾನಿ ಮತ್ತು ಟೀನಾ ಅಂಬಾನಿ ವಿದೇಶಿ ವಿನಿಮಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಹೊಸ ಪ್ರಕರಣವನ್ನು ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ