ಇಂದು IPL 31ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿ (PBKS VS KKR) ಆಗುತ್ತಿವೆ. ಪಂದ್ಯ ಚಂಡೀಗಢದ ಮಹಾರಾಜ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪಂಜಾಬ್ ಕಿಂಗ್ಸ್ (PBKS): ಈ ಋತುವಿನಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ಐದು ಪಂದ್ಯಗಳನ್ನು ಆಡಿದೆ. ಈ ಪೈಕಿ 4 ಪಂದ್ಯಗಳಲ್ಲಿ ಗೆದ್ದು 2ರಲ್ಲಿ ಸೋಲು ಕಂಡಿದೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುವ ಕೊನೆಯ ಪಂದ್ಯದಲ್ಲಿ 8 ವಿಕೆಟ್ ಗಳಿಂದ ಸೋತು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ (KKR): ಅಜಿಂಕ್ಯ ರಹಾನೆ ನೇತೃತ್ವದ ಕೆಕೆಆರ್ ಈವರೆಗೂ 6 ಪಂದ್ಯಗಳಲ್ಲಿ 3 ಗೆಲುವು ಹಾಗೂ 3 ಸೋಲು ದಾಖಲಿಸಿದೆ. ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 8 ವಿಕೇಟ್‍ಗಳಿಂದ ಜಯ ಸಾಧಿಸಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
ಈ ತಂಡಗಳು ಇವರೆಗೆ 33 ಪಂದ್ಯಗಳಲ್ಲಿ ಎದುರಿಸಿವೆ, ಅಲ್ಲಿ ಕೆಕೆಆರ್ 21 ಬಾರಿ ಗೆದ್ದಿದೆ ಮತ್ತು ಪಂಜಾಬ್ 12 ಬಾರಿ ಜಯಿಸಿದೆ.
ಹೈಸ್ಕೋರ್ ಮತ್ತು ಕನಿಷ್ಠ ಸ್ಕೋರ್
- ಪಂಜಾಬ್ ಕಿಂಗ್ಸ್ ವಿರುದ್ಧ ಕೆಕೆಆರ್: 261 ರನ್ (ಹೈಸ್ಕೋರ್), 109 ರನ್ (ಕನಿಷ್ಠ ಸ್ಕೋರ್)
- ಕೆಕೆಆರ್ ವಿರುದ್ಧ ಪಂಜಾಬ್ ಕಿಂಗ್ಸ್: 262 ರನ್ (ಹೈಸ್ಕೋರ್), 119 ರನ್ (ಕನಿಷ್ಠ ಸ್ಕೋರ್)
ತಂಡಗಳು
ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ಮಾರ್ಕಸ್ ಸ್ಟೊಯಿನಿಸ್, ನೆಹಾಲ್ ವಧೇರಾ, ಗ್ಲೆನ್ ಮ್ಯಾಕ್ಸ್ವೆಲ್, ಶಶಾಂಕ್ ಸಿಂಗ್, ಮಾರ್ಕೊ ಜಾನ್ಸೆನ್, ಅರ್ಷ್ದೀಪ್ ಸಿಂಗ್, ಯಜ್ವೇಂದ್ರ ಚಾಹಲ್, ಬಾರ್ಟ್ಲೆಟ್.
ಕೋಲ್ಕತ್ತಾ ನೈಟ್ ರೈಡರ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸುನಿಲ್ ನರೈನ್, ಅಜಿಂಕ್ಯ ರಹಾನೆ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಮೊಯಿನ್ ಅಲಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಹರ್ಷಿತ್ ರಾಣಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ.
ಪಂದ್ಯ ಪ್ರಾರಂಭ
- ರಾತ್ರಿ 7.30ಕ್ಕೆ
- ನೇರಪ್ರಸಾರ
- ಸ್ಟಾರ್ ಸ್ಪೋರ್ಟ್ಸ್, ಜಿಯೋಹಾಟ್ಸ್ಟಾರ್