Bidadi, Ramanagar (Ramanagara) : ಭಾನುವಾರ ಬಿಡದಿ ಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ Toyota Kirloskar ಕಂಪನಿಯ ತಾಂತ್ರಿಕ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಹಾಗೂ ಎರಡನೇ ಹಂತದ ತರಬೇತಿ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮ ಹಾಗೂ e-Drive ಅಭಿಯಾನಕ್ಕೆ ಚಾಲನೆ ದೊರೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಕೈಗಾರಿಕಾ ಸಚಿವ ಡಾ.ಮಹೇಂದ್ರ ನಾಥ್ ಪಾಂಡೆ (Mahendra Nath Pandey) “ಟೊಯೋಟಾ ಕಿರ್ಲೋಸ್ಕರ್ ಸಂಸ್ಥೆ ಕಾರು ಉತ್ಪಾದನೆಗೆ ಜತೆಗೆ ಗ್ರಾಮೀಣ ಪ್ರದೇಶದ ಯುವಕರಿಗೆ ಆಟೋಮೊಬೈಲ್ (Automobile) ಕ್ಷೇತ್ರದ ಬಗ್ಗೆ ತರಬೇತಿ ನೀಡುತ್ತಿರುವುದು ಶ್ಲಾಘನೀಯ. ಕೇಂದ್ರ ಸರ್ಕಾರದ (Central Government) ಯೋಜನೆಗಳು ಕೈಗಾರಿಕೆಗಳಿಗೆ (Industries) ಆದ್ಯತೆ ನೀಡಿ ಯುವ ಸಮೂಹಕ್ಕೆ ಉತ್ತೇಜನ ನೀಡುವಂತದ್ದಾಗಿದ್ದು ಸ್ವಾವಲಂಬಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಹಕಾರಿಯಾಗಿದೆ” ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ (Dr C. N. Ashwathnarayan), ಶಾಸಕ ಎ.ಮಂಜುನಾಥ್, ಟಿಕೆಎಂ ಉಪಾಧ್ಯಕ್ಷ ವಿಕ್ರಂ ಕಿರ್ಲೋಸ್ಕರ್, ವ್ಯವಸ್ಥಾಪಕ ನಿರ್ದೇಶಕ ಮಸಕಾಜು ಯೋಶಿಮುರಾ, ಟೊಯೋಟಾ ಕಿರ್ಲೋಸ್ಕರ್ ಆಟೋ ಪಾರ್ಟ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಪ್ರಸಾದ್, ಜಿಲ್ಲಾಧಿಕಾರಿ ಅವಿನಾಶ್ ರಾಜೇಂದ್ರನ್ ಮೆನನ್ , ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಂತೋಷ್ ಬಾಬು ಉಪಸ್ಥಿತರಿದ್ದರು.