
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನ್ಯಾಯಾಂಗ ಇಲಾಖೆಯಲ್ಲಿ ಮಾತನಾಡುತ್ತಾ ತಮ್ಮ ರಾಜಕೀಯ ಶತ್ರುಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮಾತನಾಡಿದ ಅವರು, ತಮ್ಮ ರಾಜಕೀಯ ಎದುರಾಳಿಗಳನ್ನು ಜೈಲಿಗೆ ಕಳುಹಿಸುವುದಾಗಿ ಘೋಷಿಸಿದ್ದಾರೆ.
ನಮ್ಮ ಸರ್ಕಾರದಿಂದ ಭ್ರಷ್ಟ ಶಕ್ತಿಗಳನ್ನು ಹೊರಹಾಕಿ, ಅವರ ಅಪರಾಧಗಳನ್ನು ಬಹಿರಂಗಪಡಿಸುತ್ತೇವೆ ಎಂದು ಹೇಳಿದ್ದಾರೆ.
2021ರಲ್ಲಿ ಅಫ್ಘಾನಿಸ್ತಾನದಿಂದ ಯುಎಸ್ ಸೇನೆಯನ್ನು ಹಿಂದಕ್ಕೆ ಪಡೆಯುವ ನಿರ್ಧಾರ ಅಮೆರಿಕಕ್ಕೆ ಅವಮಾನ ತಂದಿದ್ದು, ಇದಕ್ಕಾಗಿ ಜೋ ಬೈಡನ್ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ನ್ಯಾಯಾಂಗ ಇಲಾಖೆ ತಮ್ಮ ವಿರುದ್ಧ ಅಸ್ತ್ರವಾಗಿ ಬಳಕೆಯಾಗುತ್ತಿದೆ ಎಂದು ಆರೋಪಿಸಿದ ಟ್ರಂಪ್, “ನ್ಯಾಯಾಂಗವನ್ನು ಅನ್ಯಾಯದಾಗಿ ಪರಿವರ್ತಿಸುವ ದಿನಗಳು ಮುಗಿದಿವೆ” ಎಂದು ತೀವ್ರ ಪ್ರತಿಕ್ರಿಯೆ ನೀಡಿದರು.