Home Karnataka Tumakuru Tumkur ನಲ್ಲಿ Congress ನವ ಸಂಕಲ್ಪ ಶಿಬಿರ

Tumkur ನಲ್ಲಿ Congress ನವ ಸಂಕಲ್ಪ ಶಿಬಿರ

0
Tumkur Congress Nava Sankalp Shibir D K Shiva Kumar Dr G Parameshwara

Tumkur (Tumakuru) : ತುಮಕೂರು ನಗರದ ಸಿದ್ಧಾರ್ಥ ವೈದ್ಯಕೀಯ ಕಾಲೇಜು (Sri Siddhartha Medical College) ಹತ್ತಿರದ ಎಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಭಾನುವಾರ ಕಾಂಗ್ರೆಸ್‌ ನವ ಸಂಕಲ್ಪ ಶಿಬಿರ (Congress Nava Sankalp Shibir) ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D K Shivakumar) “ಈ ಹಿಂದೆ ಚುನಾವಣೆ ಸಮಯದಲ್ಲಿ ಹೇಳಿದಂತೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಕೆಲಸ BJP ಮಾಡಿಲ್ಲ ಹಾಗೆಯೇ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೂ ಕ್ರಮಕೈಗೊಂಡಿಲ್ಲ. ಗ್ಯಾಸ್, ಪೆಟ್ರೋಲ್, ಡಿಸೇಲ್ ಸೇರಿದಂತೆ ಎಲ್ಲ ದಿನ ಬಳಕೆಯ ವಸ್ತು ಗಳ ಬೆಲೆ ಏರಿಕೆಯಾಗುತ್ತಿದೆ. ಜನರು ಬದಲಾವಣೆ ಬಯಸಿದ್ದು, ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ಡಾ.ಜಿ.ಪರಮೇಶ್ವರ (Dr G Parameshwara), ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ (B. K. Hariprasad), ಶಾಸಕ ವೆಂಕಟರಮಣಪ್ಪ, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಮುಖಂಡರಾದ ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ, ಬೆಮೆಲ್‌ ಕಾಂತರಾಜು, ಷಡಕ್ಷರಿ, ಶಫಿ ಅಹ್ಮದ್‌, ರಫೀಕ್ ಅಹ್ಮದ್‌, ಬಿ.ಬಿ.ರಾಮಸ್ವಾಮಿಗೌಡ, ಸಾಸಲು ಸತೀಶ್, ಜಿ.ಜೆ.ರಾಜಣ್ಣ, ಆರ್.ರಾಮಕೃಷ್ಣ, ಕೆಂಚಮಾರಯ್ಯ ಮತ್ತು ಅನೇಕ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version