Tumkur, Tumakuru : ತುಮಕೂರು ನಗರದಲ್ಲಿ ಬುಧವಾರ ಜಿಲ್ಲಾ ಆಡಳಿತ ಹಮ್ಮಿಕೊಂಡಿದ್ದ ಕುವೆಂಪು ಜನ್ಮ ದಿನಾಚರಣೆ (Kuvempu Birth Anniversary) ಕಾರ್ಯಕ್ರಮವನ್ನು ಕಾಂಗ್ರೆಸ್ ಮುಖಂಡ ಮುರಳೀಧರ ಹಾಲಪ್ಪ ಕೂವೆಂಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮುರಳೀಧರ ಹಾಲಪ್ಪ, “ಮನುಜ ಮತ ವಿಶ್ವಪಥ ಎಂದು ವಿಶ್ವಕ್ಕೆ ಸಾರಿದ ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅವರಿಗಿದ್ದ ಸರಳತೆ, ವೈಚಾರಿಕತೆಯ ದೃಷ್ಟಿಕೋನವನ್ನು ಅವರ ಸಾಹಿತ್ಯದಿಂದ ಅರಿಯಬಹುದಾಗಿದೆ. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರಕವಿ ಕುವೆಂಪು ಅಧ್ಯಯನ ಕೇಂದ್ರ ಸ್ಥಾಪಿಸುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ” ಎಂದು ಹೇಳಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಹರಾಜು, ಜಿಲ್ಲಾ ಕೌಶಲ ಅಭಿವೃದ್ಧಿ ಇಲಾಖೆ ಅಧಿಕಾರಿ ಕೆ.ಶ್ರೀನಿವಾಸ್, ನಿವೃತ್ತ ಪ್ರಾಂಶುಪಾಲ ವೀರಯ್ಯ, ನೌಕರರ ಸಂಘದ ಕೊರಟಗೆರೆ ಘಟಕದ ಕಾರ್ಯದರ್ಶಿ ಜಯಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯವಸ್ಥಾಪಕ ಡಿ.ವಿ.ಸುರೇಶ್ ಕುಮಾರ್, ಉಪನ್ಯಾಸಕರ ಸಂಘದ ರಮೇಶ್, ರೋಟೇರಿಯನ್ ಎಂ.ವಿ.ಬಸವರಾಜು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.