Tumkur : ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ವತಿಯಿಂದ ತುಮಕೂರು ನಗರದ ಕ್ಯಾತ್ಸಂದ್ರದ (Kyatsandra) ಬಳಿ ನಿರ್ಮಿಸಿರುವ ಡಿ.ದೇವರಾಜು ಅರಸು ಭವನದ (D. Devaraj Urs Bhavan) ಉದ್ಘಾಟನೆ ಬುಧವಾರ ನೆರವೇರಿತು.
ಭವನ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ (Araga Jnanendra) “ಹಿಂದುಳಿದ ವರ್ಗದ ಸಮುದಾಯಗಳನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಕೆಲಸಕ್ಕೆ ರಾಜ್ಯ ಸರ್ಕಾರ ಉತ್ತೇಜನ ನೀಡುತ್ತಿದ್ದು ಭವನಗಳ ನಿರ್ಮಾಣದ ಮೂಲಕ ನೆರವು ನೀಡಲಾಗುತ್ತಿದೆ” ಎಂದು ಹೇಳಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಕೆ.ಶಹಪೂರವಾಡ್, ಮೈದಾಳ ಗ್ರಾ.ಪಂ ಅಧ್ಯಕ್ಷೆ ಮಾಲಾ ಮಂಜುನಾಥ್, ಉಪಾಧ್ಯಕ್ಷ ಕೆ.ಎಸ್.ನರಸಿಂಹ ಮೂರ್ತಿ, ಜಿಲ್ಲಾ ಬಿಸಿಎಂ ಅಧಿಕಾರಿ ಎಸ್.ಆರ್.ಗಂಗಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ರಾಜಶೇಖರ್ ಮತ್ತಿತರರು ಉಪಸ್ಥಿತರಿದ್ದರು.