Bengaluru : ಬೆಂಗಳೂರಿನ ಅತ್ಯಂತ ವಾಹನ ದಟ್ಟಣೆ ಇರುವ ತುಮಕೂರು ರಸ್ತೆಯ (Tumkur Road) ಎಲಿವೇಟೆಡ್ ಕಾರಿಡಾರ್ ಅನ್ನು (ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ – Goraguntepalya Shivakumara Swamiji Flyover) ಭಾರತೀಯ ವಿಜ್ಞಾನ ಸಂಸ್ಥೆಯ (IISc) ತಜ್ಞರ ತಂಡ ಪರಿಶೀಲಿಸಿದೆ.
December 25ರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮೇಲ್ಸೇತುವೆಯ ಎರಡು ಪಿಲ್ಲರ್ ಗಳನ್ನು ಸಂಪರ್ಕಿಸುವ ಕೇಬಲ್‌ನಲ್ಲಿ ದೋಷ ಕಂಡು ಬಂದಿದ್ದರಿಂದ ವಾಹನ ಸಂಚಾರ ನಿರ್ಬಂಧಿಸಿ ದುರಸ್ತಿ ಕಾಮಗಾರಿ ಕೈಗೊಂಡಿತ್ತು. ಕಾಮಗಾರಿ ನಡೆಯುತ್ತಿರುವ ಎಂಜಿನಿಯರ್ ತಂಡದೊಂದಿಗೆ IISc ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಶೀಘ್ರವೇ ವರದಿ ನೀಡುವ ಸಾಧ್ಯತೆಗಳಿವೆ.
ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ತಜ್ಞರು ನೀಡುವ ಅಭಿಪ್ರಾಯದ ಮೇಲೆ ರಸ್ತೆಯನ್ನು ಸಾರ್ವಜನಿಕರ ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಬಹುತೇಕ ಒಂದು ವಾರದ ಒಳಗೆ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.